ADVERTISEMENT

ಬಂಗಾಳದ ಸಚಿವರಿಗೆ 10 ಬಾರಿ ಕರೆ ಮಾಡಿದರೂ ಸ್ವೀಕರಿಸುವುದಿಲ್ಲ: ಸಚಿವೆ ಪ್ರತಿಮಾ

ಪಿಟಿಐ
Published 2 ಆಗಸ್ಟ್ 2022, 14:21 IST
Last Updated 2 ಆಗಸ್ಟ್ 2022, 14:21 IST
ಪ್ರತಿಮಾ ಭೌಮಿಕ್‌ ಅವರು ಲೋಕಸಭೆಯಲ್ಲಿ ಮಂಗಳವಾರ ಮಾತನಾಡಿದರು–ಪಿಟಿಐ ಚಿತ್ರ
ಪ್ರತಿಮಾ ಭೌಮಿಕ್‌ ಅವರು ಲೋಕಸಭೆಯಲ್ಲಿ ಮಂಗಳವಾರ ಮಾತನಾಡಿದರು–ಪಿಟಿಐ ಚಿತ್ರ   

ನವದೆಹಲಿ (ಪಿಟಿಐ): ‘ಪಶ್ಚಿಮ ಬಂಗಾಳದ ಸಚಿವರಿಗೆ 10 ಬಾರಿ ಕರೆ ಮಾಡಿದರೂ ಸ್ವೀಕರಿಸುವುದಿಲ್ಲ.ಸಚಿವರ ಮೊಬೈಲ್‌ ಸಂಖ್ಯೆ ಕೊಡಲು ಅವರ ಸಹವರ್ತಿಗಳು ಹೆದರುತ್ತಾರೆ’ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವೆ ಪ್ರತಿಮಾ ಭೌಮಿಕ್‌ ಹೇಳಿದ್ದಾರೆ.

ಕೇಂದ್ರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದರೊಬ್ಬರು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದ್ದಾರೆ.

‘ದೂರವಾಣಿ ಕರೆ ಸ್ವೀಕರಿಸದಿರುವುದು ಪಶ್ಚಿಮ ಬಂಗಾಳದಲ್ಲಿ ಹವ್ಯಾಸವಾಗಿಬಿಟ್ಟಿದೆ. ನಮ್ಮ ಮಾತು ಕೇಳಲೂ ಅವರು ತಯಾರಿರುವುದಿಲ್ಲ’ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.