ADVERTISEMENT

ಭವಾನಿಪುರ ಮತ ಎಣಿಕೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಮುನ್ನಡೆ

ಪಿಟಿಐ
Published 3 ಅಕ್ಟೋಬರ್ 2021, 5:36 IST
Last Updated 3 ಅಕ್ಟೋಬರ್ 2021, 5:36 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯ ಎರಡನೇ ಸುತ್ತು ಕೊನೆಗೊಂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 2,377 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.

ಟಿಎಂಸಿ ಅಭ್ಯರ್ಥಿಯೂ ಆಗಿರುವ ಮಮತಾ ಅವರು 5,333 ಮತಗಳನ್ನು ಗಳಿಸಿದ್ದರೆ, ಅವರ ಸಮೀಪದ ಪ್ರತಿಸ್ಪರ್ಧಿ ಪ್ರಿಯಾಂಕಾ ಟಿಬ್ರೆವಾಲ್‌ ಅವರು 2,956 ಮತಗಳನ್ನು ಗಳಿಸಿದ್ದಾರೆ. ಸಿಪಿಎಂನ ಶ್ರೀಜಿಬ್‌ ಬಿಸ್ವಾಸ್ 132 ಮತಗಳನ್ನು ಗಳಿಸಿದ್ದಾರೆ.

ಸೆ.30ರಂದು ಚುನಾವಣೆ ನಡೆದಿತ್ತು. ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಇಲ್ಲಿ ಗೆಲುವು ಸಾಧಿಸಲೇಬೇಕಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.