ADVERTISEMENT

ಪಶ್ಚಿಮ ಬಂಗಾಳದಲ್ಲಿ 95ರ ವ್ಯಕ್ತಿ ಆತ್ಮಹತ್ಯೆ: SIR ಭಯ ಕಾರಣ ಎಂದ ಕುಟುಂಬ

ಪಿಟಿಐ
Published 30 ಅಕ್ಟೋಬರ್ 2025, 13:58 IST
Last Updated 30 ಅಕ್ಟೋಬರ್ 2025, 13:58 IST
<div class="paragraphs"><p> ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಕೋಲ್ಕತ್ತ: ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ 95 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಮಾಡುತ್ತಾರೆ ಎನ್ನುವ ಒತ್ತಡ, ಭಯದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.

ADVERTISEMENT

ಕಳೆದ 72 ಗಂಟೆಯಲ್ಲಿ ಎರಡು ಆತ್ಮಹತ್ಯೆ ಪ್ರಕರಣ ವರದಿಯಾಗಿವೆ.

ಮೃತ ವ್ಯಕ್ತಿಯನ್ನು ಕ್ಷಿತಿಶ್ ಮಜುಂದಾರ್ ಎಂದು ಗುರುತಿಸಲಾಗಿದ್ದು, ಬಿರ್‌ಬುಮ್‌ ಜಿಲ್ಲೆಯಲ್ಲಿದ್ದ ಮಗಳ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2002ರಿಂದ ಕ್ಷಿತಿಶ್ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಇರಲಿಲ್ಲ ಎಂದು ಅವರು ಗಾಬರಿಯಾಗಿದ್ದರು ಎಂದು ಕುಟುಂಬ ಸದಸ್ಯರೊಬ್ಬರು ತಿಳಿಸಿದ್ದಾರೆ. 

ಪ್ರಾಥಮಿಕ ತನಿಖೆಯಲ್ಲಿ ಕ್ಷಿತಿಶ್ ಅವರ ಹೆಸರು ಮತದಾರರ ಪಟ್ಟಿಯಲ್ಲಿದೆ, ಅವರು ಹಲವು ಬಾರಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ ಎಂದು ತಿಳಿದುಬಂದಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ತಿಳಿಸಿದೆ.

ಕ್ಷಿತಿಶ್ ಕುಟಂಬ 1995ರಲ್ಲಿ ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳಕ್ಕೆ ಸ್ಥಳಾಂತರಗೊಂಡು ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ನೆಲೆಸಿತ್ತು.

ಈ ಘಟನೆಯ ಬಗ್ಗೆ ಚುನಾವಣಾ ಆಯೋಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದೇ ವೇಳೆ ಎಸ್‌ಐಆರ್‌ನ ಒತ್ತಡದಿಂದ ಜನರು ಮೃತಪಟ್ಟಿರುವುದನ್ನು ಖಂಡಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಬಿಜೆಪಿಯ ಭಯ, ವಿಭಜನೆ ಮತ್ತು ದ್ವೇಷದ ರಾಜಕೀಯದ ದುರಂತ ಪರಿಣಾಮಗಳು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.