ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ
ಪಿಟಿಐ ಚಿತ್ರ
ಕೋಲ್ಕತ್ತ: ಹಿಂದೂ ಸಮುದಾಯದವರ ಮೇಲೆ ಪದೇ ಪದೇ ಹಲ್ಲೆ ನಡೆಯುತ್ತಿರುವ ಕಾರಣ ಪಶ್ಚಿಮ ಬಂಗಾಳದ ಗಡಿಯಲ್ಲಿರುವ 4 ಜಿಲ್ಲೆಗಳನ್ನು ‘ಪ್ರಕ್ಷುಬ್ಧ' ಪ್ರದೇಶ’ ಎಂದು ಘೋಷಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬಿಜೆಪಿ ಶಾಸಕ ಜ್ಯೋತಿರ್ಮೆ ಸಿಂಗ್ ಮೆಹತೊ ಪತ್ರ ಬರೆದಿದ್ದಾರೆ.
ಮುರ್ಶಿದಾಬಾದ್, ಮಾಲ್ದಾ, ನಾದಿಯಾ ಮತ್ತು 24 ಪರಗಣ ಜಿಲ್ಲೆಗಳಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ ನಡೆದಿದೆ. ಆದರೂ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಮುರ್ಶಿದಾಬಾದ್ ಜಿಲ್ಲೆಯಲ್ಲಿ 86 ಹಿಂದೂಗಳ ಮನೆ ಮತ್ತು ಅಂಗಡಿಗಳನ್ನು ಲೂಟಿ ಮಾಡಿ, ನಾಶಪಡಿಸಲಾಗಿದೆ. ಇಬ್ಬರನ್ನು ಹತ್ಯೆ ಮಾಡಿದ್ದಾರೆ. ವೀಳ್ಯದೆಲೆ ತೋಟಕ್ಕೆ ಬೆಂಕಿ ಹಚ್ಚಿ ನಾಶಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ವಕ್ಫ್ ಕಾಯ್ದೆ ವಿರುದ್ಧವಾಗಿ ಭುಗಿಲೆದ್ದ ಹಿಂಸಾಚಾರದ ಕುರಿತು ಉಲ್ಲೇಖಿಸಿರುವ ಅವರು, ಪ್ರತಿಭಟನಾಕಾರರು ಹಿಂದೂಗಳ ಮನೆ, ಸಾರ್ವಜನಿಕ ಆಸ್ತಿ, ಅಷ್ಟೇ ಅಲ್ಲದೆ ಪೊಲೀಸರ ಮೇಲೂ ದಾಳಿ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಪತ್ರದಲ್ಲಿ ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.