ADVERTISEMENT

ಪಶ್ಚಿಮ ಬಂಗಾಳ: 26 ಲಕ್ಷ ಮತದಾರರು ಹೊಂದಿಕೆ ಆಗುತ್ತಿಲ್ಲ; ಚುನಾವಣಾ ಆಯೋಗ

ಪಿಟಿಐ
Published 27 ನವೆಂಬರ್ 2025, 13:11 IST
Last Updated 27 ನವೆಂಬರ್ 2025, 13:11 IST
.
.   

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿನ ಈಗಿನ ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪೈಕಿ 26 ಲಕ್ಷ ಮತದಾರರ ಹೆಸರುಗಳು 2002ರ ಪಟ್ಟಿಯೊಂದಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.  

2002 ಮತ್ತು 2006ರಲ್ಲಿ ವಿವಿಧ ರಾಜ್ಯಗಳಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ಈಗ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯ ಜತೆ ಹೋಲಿಸಿ ನೋಡಲಾಗುತ್ತಿದೆ. ಈ ವೇಳೆ ಪಶ್ಚಿಮ ಬಂಗಾಳದಲ್ಲಿ ಇಷ್ಟು ವ್ಯತ್ಯಾಸ ಕಂಡುಬಂದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

6 ಕೋಟಿ ಅರ್ಜಿ ಡಿಜಿಟಲೀಕರಣ: ‌ಹಾಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಆರು ಕೋಟಿಗೂ ಹೆಚ್ಚು ಗಣತಿ ನಮೂನೆಗಳ ಡಿಜಿಟಲೀಕರಣ ಮಾಡಲಾಗಿದೆ. ಒಮ್ಮೆ ಈ ಕಾರ್ಯ ಪೂರ್ಣಗೊಂಡ ಬಳಿಕ ನಮೂನೆಗಳನ್ನು ಮ್ಯಾ‍ಪಿಂಗ್‌ ಮಾಡಲಾಗುತ್ತದೆ. ಅಲ್ಲಿ ಅವುಗಳನ್ನು ಹಿಂದಿನ ಎಸ್‌ಐಆರ್‌ ದಾಖಲೆಗಳೊಂದಿಗೆ ಹೊಂದಿಸಿ ಪರಿಶೀಲಿಸಲಾಗುತ್ತದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ADVERTISEMENT

ಡಿಜಿಟಲೀಕರಣ ಕಾರ್ಯ ಮುಂದುವರಿದಂತೆ ಈ ವ್ಯತ್ಯಾಸ ಮತ್ತಷ್ಟು ಹಿಗ್ಗಬಹುದು ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಮ್ಯಾಪಿಂಗ್‌ನಲ್ಲಿ ಹೊಂದಾಣಿಕೆ ಆಗಿಲ್ಲದಿದ್ದರೆ ಅಂತಿಮ ಮತದಾರರ ಪಟ್ಟಿಯಿಂದ ಸ್ವಯಂ ಚಾಲಿತವಾಗಿ ತೆಗೆದುಹಾಕಲಾಗುತ್ತದೆ ಎಂದು ಅರ್ಥವಲ್ಲ ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.