ADVERTISEMENT

ಚುನಾವಣೋತ್ತರ ಹಿಂಸಾಚಾರ ಪ್ರಕರಣ: ‘ಸುಪ್ರೀಂ’ ಅಫಿಡವಿಟ್‌ ಸಲ್ಲಿಸಿದ ಕೇಂದ್ರ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 13:48 IST
Last Updated 22 ಅಕ್ಟೋಬರ್ 2021, 13:48 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಸಿಬಿಐ ತನಿಖೆಗೆ ಒಪ್ಪಿಗೆ ನೀಡುವುದನ್ನು ಪಶ್ಚಿಮ ಬಂಗಾಳ ಸರ್ಕಾರ ತಡೆಹಿಡಿಯುವುದು ಸಮಂಜಸವಲ್ಲ. ಕೇಂದ್ರ ಸರ್ಕಾರಿ ನೌಕರರ ವಿರುದ್ಧ ಮತ್ತು ದೇಶದಾದ್ಯಂತ ಪರಿಣಾಮ ಬೀರುವಂತಹ ಪ್ರಕರಣಗಳ ತನಿಖೆ ನಡೆಸಲು ತನಿಖಾ ಸಂಸ್ಥೆ ಅರ್ಹವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಪಶ್ಚಿಮ ಬಂಗಾಳ ಸರ್ಕಾರ ಹೂಡಿರುವ ಮೊಕದ್ದಮೆಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರವು ಈ ಅಫಿಡವಿಟ್ ಸಲ್ಲಿಸಿದೆ.

ಕಾನೂನಿನ ಅಡಿಯಲ್ಲಿ ರಾಜ್ಯದಿಂದ ಪೂರ್ವಭಾವಿ ಅನುಮೋದನೆ ಪಡೆಯದ ಸಿಬಿಐ, ಚುನಾವಣೆಯ ನಂತರದ ಹಿಂಸಾಚಾರ ಪ್ರಕರಣಗಳಲ್ಲಿ ತನಿಖೆ ಮುಂದುವರಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರವು, ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.