ADVERTISEMENT

ಪಿಎಫ್‌ಐ ಜೊತೆ ನಿಷೇಧಿಸಲ್ಪಟ್ಟ ಇತರೆ ಸಂಘಟನೆಗಳು ಯಾವುವು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಸೆಪ್ಟೆಂಬರ್ 2022, 8:25 IST
Last Updated 28 ಸೆಪ್ಟೆಂಬರ್ 2022, 8:25 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಕೇಂದ್ರ ಸರ್ಕಾರ1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಬ್ಯಾನ್‌ ಮಾಡಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧವಿಧಿಸಿ ಕೇಂದ್ರ ಗೃಹ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ.

*ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)

*ರಿಹಾಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್)

*ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ)

*ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ)

*ನ್ಯಾಷನಲ್‌ ವುಮೆನ್ಸ್‌ ಫ್ರಂಟ್‌ (ಎನ್‌ಡಬ್ಲ್ಯೂಎಫ್‌)

*ನ್ಯಾಷನಲ್ ಕಾನ್ಫೆಡರೇಷನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್ (ಎನ್‌ಸಿಎಚ್‌ಆರ್‌ಒ)

* ಜೂನಿಯರ್ ಫ್ರಂಟ್

* ಎಂಪವರ್ ಇಂಡಿಯಾ ಫೌಂಡೇಷನ್‌

ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಇತ್ತೀಚೆಗಷ್ಟೇಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಐಎನ್‌ಎ) ದಾಳಿ ನಡೆಸಿತ್ತು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.