ADVERTISEMENT

ಹಣಕಾಸು ಇಲಾಖೆಯೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಲು ಕಾರಣವೇನು? - ಖರ್ಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಮಾರ್ಚ್ 2022, 16:16 IST
Last Updated 23 ಮಾರ್ಚ್ 2022, 16:16 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ಹಣಕಾಸು ಇಲಾಖೆ ಬಜೆಟ್‌ನೊಂದಿಗೆ ರೈಲ್ವೆ ಮುಂಗಡಪತ್ರ ವಿಲೀನಗೊಳಿಸಿದ್ದರ ಹಿಂದಿನ ಕಾರಣವೇನು ಎಂದು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಪ್ರಶ್ನೆ ಮಾಡಿದ್ದಾರೆ.

ರಾಜ್ಯಸಭೆಯಲ್ಲಿ ಈ ಕುರಿತು ಮಾತನಾಡಿರುವ ಖರ್ಗೆ, ಎಲ್ಲ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯುತ್ತಿದ್ದವು. ಆದರೆ ಹಣಕಾಸು ಇಲಾಖೆಯೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದರ ಸಮಸ್ಯೆ ಎದುರಾಗಿದೆ ಎಂದು ಹೇಳಿದ್ದಾರೆ.

ಹಿಂದಿನ ರೈಲ್ವೆ ಇಲಾಖೆಯು ಬಹಳಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿತ್ತು. ಇದರಿಂದ ಅಗತ್ಯ ಕೆಲಸಗಳನ್ನು ಬೇಗನೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿತ್ತು. ಆದರೆ ಈಗ ಹಣಕಾಸು ಇಲಾಖೆಯ ಒಪ್ಪಿಗೆಗಾಗಿ ಸಾಲುಗಟ್ಟಿ ನಿಂತಿವೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.