ಅಮಿತ್ ಶಾ
– ಪಿಟಿಐ ಚಿತ್ರ
ನವದೆಹಲಿ: ಪಶ್ಚಿಮ ಬಂಗಾಳದ ಜನರು ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದಾಗ, ಅಕ್ರಮ ವಲಸೆ ಸಮಸ್ಯೆ ಬಗೆಹರಿಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
‘ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆ’ಯಲ್ಲಿ ಮಾತನಾಡಿದ ಅವರು, ‘ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯನ್ನು ಜೆಡಿಯು ನಾಯಕ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಎದುರಿಸಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.
ಅಕ್ರಮ ಒಳನುಸುಳುವಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಪಶ್ಚಿಮ ಬಂಗಾಳದ ಜನರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ, ಅಕ್ರಮ ಒಳನುಸುಳುವಿಕೆ ಸಮಸ್ಯೆ ಬಗೆಹರಿಯುತ್ತದೆ. ಇಂಡೋ- ಬಾಂಗ್ಲಾ ಗಡಿಯಲ್ಲಿ ಅಪರಾಧಗಳು ನಿಲ್ಲುತ್ತವೆ’ ಎಂದು ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಗಡಿ ಕಾಯುತ್ತಿರುವ ಗಡಿ ಭದ್ರತಾ ಪಡೆ (BSF)ಯನ್ನು ಅಕ್ರಮ ಒಳನುಸುಳುವಿಕೆಯ ಹೊಣೆಗಾರರನ್ನಾಗಿ ಮಮತಾ ಬ್ಯಾನರ್ಜಿ ಮಾಡುತ್ತಿದ್ದಾರೆ. ಅಂತಹ ನುಸುಳುಕೋರರ ಮತದಾರರ ಗುರುತಿನ ಚೀಟಿಗಳು ಮತ್ತು ಆಧಾರ್ ಕಾರ್ಡ್‌ಗಳನ್ನು ಯಾರು ತಯಾರಿಸಿದರು ಎಂಬುದು ನನ್ನ ಪ್ರಶ್ನೆಯಾಗಿದೆ ಎಂದು ಶಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.