ADVERTISEMENT

ಪ್ರಚಾರ ಕೈಗೊಳ್ಳಲು ನರೇಂದ್ರ ಮೋದಿಗೆ ಎಲ್ಲಿಂದ ಹಣ ಬರುತ್ತಿದೆ: ರಾಹುಲ್ ಪ್ರಶ್ನೆ

ಪಿಟಿಐ
Published 16 ಏಪ್ರಿಲ್ 2019, 2:47 IST
Last Updated 16 ಏಪ್ರಿಲ್ 2019, 2:47 IST
   

ಆಗ್ರಾ: ವಾಹಿನಿಗಳಲ್ಲಿ 30 ಸೆಕೆಂಡ್‌ ಜಾಹೀರಾತಿಗೆ ಲಕ್ಷಗಟ್ಟಲೆ ಪಾವತಿಸಬೇಕಿರುವಾಗ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಕೈಗೊಳ್ಳಲು ಎಲ್ಲಿಂದ ಹಣ ಬರುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಫತೇಪುರ್ ಸಿಕ್ರಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ರಾಹುಲ್, ‘ಎಲ್ಲಿ ನೋಡಿದರೂ ಮೋದಿ ಅವರ ಪ್ರಚಾರವೇ ಕಾಣುತ್ತಿದೆ. ಅವರಿಗೆ ಹಣ ಎಲ್ಲಿಂದ ಬರುತ್ತಿದೆ? ಪತ್ರಿಕೆಗಳಲ್ಲಿ ಜಾಹೀರಾತು ನೀಡಿಲು ಲಕ್ಷಾಂತರ ರೂಪಾಯಿ ಸುರಿಯಬೇಕು. ಮೋದಿ ಅವರೇನೂ ತಮ್ಮ ಜೇಬಿನಿಂದ ಹಣ ಖರ್ಚು ಮಾಡುತ್ತಿಲ್ಲ. ಹೀಗಿರುವಾಗ ಅವರಿಗೆ ಹಣ ನೀಡುತ್ತಿರುವವರು ಯಾರು’ ಎಂದು ರಾಹುಲ್ಪ್ರಶ್ನಿಸಿದ್ದಾರೆ.

‘ಮೋದಿ ಅವರು ಸಾರ್ವಜನಿಕರ ಹಣವನ್ನು ಕೊಳ್ಳೆಹೊಡೆದು ದೇಶಭ್ರಷ್ಟ ಉದ್ಯಮಿಗಳಿಗೆ ನೀಡಿದ್ದಾರೆ’ ಎಂದು ರಾಹುಲ್ ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.