ADVERTISEMENT

ಭಾರತೀಯ ವಿದ್ಯಾರ್ಥಿಗಳಿಗಿದ್ದ ಪ್ರಯಾಣ ನಿರ್ಬಂಧ ಸಡಿಲಿಸಿವೆ ಈ ರಾಷ್ಟ್ರಗಳು... 

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 17:06 IST
Last Updated 29 ಜುಲೈ 2021, 17:06 IST
ಪ್ರಾತಿನಿಧಿಕ ಚಿತ್ರ (ರಾಯಿಟರ್ಸ್‌ ಚಿತ್ರ)
ಪ್ರಾತಿನಿಧಿಕ ಚಿತ್ರ (ರಾಯಿಟರ್ಸ್‌ ಚಿತ್ರ)   

ನವದೆಹಲಿ: ಅಮೆರಿಕ, ಇಂಗ್ಲೆಂಡ್‌, ಕೆನಡಾ, ಐರ್ಲೆಂಡ್ ಮತ್ತು ಜರ್ಮನಿ ಸೇರಿದಂತೆ ಹಲವು ದೇಶಗಳು ಭಾರತೀಯ ವಿದ್ಯಾರ್ಥಿಗಳಿಗೆ ಕೋವಿಡ್‌-19 ಸಂಬಂಧಿತ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸಿವೆ ಎಂದು ವಿದೇಶಾಂಗ ಇಲಾಖೆ ರಾಜ್ಯ ಖಾತೆ ಸಚಿವ ವಿ ಮುರಳೀಧರನ್ ಸಂಸತ್ತಿಗೆ ಗುರುವಾರ ಮಾಹಿತಿ ನೀಡಿದ್ದಾರೆ.

ನೆದರ್‌ಲೆಂಡ್‌, ಬೆಲ್ಜಿಯಂ, ಲಕ್ಸೆಂಬರ್ಗ್ ಮತ್ತು ಜಾರ್ಜಿಯಾಕ್ಕೆ ಹೋಗುವ ವಿದ್ಯಾರ್ಥಿಗಳಿಗೂ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.

ಕೋವಿಡ್‌–19 ಪರಿಸ್ಥಿತಿ ಸುಧಾರಿಸುತ್ತಲೇ ಮತ್ತಷ್ಟು ದೇಶಗಳು ನಮ್ಮ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡುವ ನಿರೀಕ್ಷೆಗಳಿವೆ ಎಂದೂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.