
ದೆಹಲಿ ಸ್ಫೋಟ
(ಪಿಟಿಐ ಚಿತ್ರ)
ಶ್ರೀನಗರ: 'ವೈಟ್ ಕಾಲರ್' ಭಯೋತ್ಪಾದಕ ಜಾಲ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮೂವರು ಸರ್ಕಾರಿ ನೌಕರರು ಸೇರಿದಂತೆ 10 ಮಂದಿಯನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ.
ತನಿಖೆಯ ವಿಚಾರಣೆಯ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್, ಪುಲ್ವಾಮಾ, ಕುಲ್ಗಾಂ ಜಿಲ್ಲೆಗಳಿಂದ ಶಂಕಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಕೆಂಪು ಕೋಟೆಯ ಸಮೀಪದಲ್ಲಿ ಸೋಮವಾರ ಸಂಭವಿಸಿದ್ದ ಕಾರು ಸ್ಫೋಟದ ಬೆನ್ನಲ್ಲೇ ವೈಟ್ ಕಾಲರ್ ಭಯೋತ್ಪಾದಕ ಜಾಲವನ್ನು ಬೇಧಿಸಲು ವಿವಿಧ ಭದ್ರತಾ ಏಜೆನ್ಸಿಗಳು ತನಿಖೆಯನ್ನು ತೀವ್ರಗೊಳಿಸಿವೆ.
ಶಂಕಿತರನ್ನು ವಿಚಾರಣೆಗೆ ಒಳಪಡಿಸಿದಾಗ ಕೆಲವರು ಕಳೆದ ಸಾಲಿನಲ್ಲಿ ಟರ್ಕಿಗೆ ಭೇಟಿ ನೀಡಿದ್ದರು ಎಂಬ ಮಾಹಿತಿ ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫರೀದಾಬಾದ್‌ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ. ಈವರೆಗೆ ವೈಟ್ ಕಾಲರ್ ಭಯೋತ್ಪಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 200ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.