ಪ್ರಾತಿನಿಧಿಕ ಚಿತ್ರ
ಶ್ರೀನಗರ: ನಗರದಾದ್ಯಂತ ಇರುವ ವೈದ್ಯಕೀಯ ಸಂಸ್ಥೆಗಳು, ರಾಸಾಯನಿಕ ಮತ್ತು ರಸಗೊಬ್ಬರ ಅಂಗಡಿಗಳು ಮತ್ತು ಕಾರು ಶೋರೂಮ್‌ಗಳನ್ನು ಶ್ರೀನಗರ ಪೊಲೀಸರು ತೀವ್ರ ಪರಿಶೀಲನೆ ನಡೆಸಿದರು.
‘ವೈಟ್ ಕಾಲರ್ ಭಯೋತ್ಪಾದನಾ ಜಾಲ’ವನ್ನು ಬಯಲಿಗೆಳೆದ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಎರಡು ದಿನಗಳಿಂದ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕೃತ ವಕ್ತಾರರೊಬ್ಬರು ಶುಕ್ರವಾರ ತಿಳಿಸಿದರು.
ಹಲವು ಆಸ್ಪತ್ರೆಗಳು ಮತ್ತು ಸಾರ್ವಜನಿಕ ಆರೋಗ್ಯ ಕೇಂದ್ರಗಳ ಲಾಕರ್ ಮತ್ತು ಸ್ಟೋರೇಜ್ ರ‍್ಯಾಕ್‌ಗಳನ್ನು ಪರಿಶೀಲಿಸಲಾಯಿತು. ಸಂಸ್ಥೆಗಳು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಕೆಯಾಗುವುದನ್ನು ತಡೆಗಟ್ಟುವ ಉದ್ದೇಶದಿಂದ ಶೋಧ ನಡೆಸಲಾಯಿತು ಎಂದರು.
ರಾಸಾಯನಿಕ ಮತ್ತು ರಸಗೊಬ್ಬರ ಅಂಗಡಿಗಳಲ್ಲಿ ಶೋಧ ನಡೆಸಿ ಅಲ್ಲಿನ ಸಂಗ್ರಹ, ಮಾರಾಟ ದಾಖಲೆಗಳನ್ನು ಪರಿಶೀಲಿಸಲಾಯಿತು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.