
ಪ್ರಜಾವಾಣಿ ವಾರ್ತೆ
ಮುಂಬೈ: ಮುಂಬೈನ ನಗರ ವ್ಯಾಪ್ತಿಗೆ ಬರುವ ಧಾರಾವಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಜಗತ್ತಿನ ಅತಿ ದೊಡ್ಡ ಕೊಳೆಗೇರಿಗಳಲ್ಲಿ ಒಂದಾದ ಧಾರಾವಿ ವಿಧಾನಸಭೆ ಕ್ಷೇತ್ರದಲ್ಲಿ ಸದ್ಯ ಮೂರು ಸುತ್ತುಗಳ ಮತ ಎಣಿಕೆ ಕಾರ್ಯಮುಕ್ತಾಯಗೊಂಡಿದ್ದು, ಕಾಂಗ್ರೆಸ್‌ನ ವರ್ಷ ಗಾಯ್ಕ್‌ವಾಡ್ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಸದ್ಯ ಅವರು3,140 ಮತಗಳ ಅಂತರದ ಅಲ್ಪ ಮುನ್ನಡೆ ಸಾಧಿಸಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ: ಸಂಪೂರ್ಣ ವಿವರ
–ವರ್ಷ ಗಾಯ್ಕ್‌ವಾಡ್ (ಕಾಂಗ್ರೆಸ್):11,121
–ಆಶಿಶ್ ಮೋರ್ (ಶಿವಸೇನೆ):7,981
–ಮನೋಜ್ ಸನ್ಸಾರೆ(ಎಂಐಎಂ):2,266
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.