ನವದೆಹಲಿ: ಕೋಲ್ಡ್ರಿಫ್, ರೆಸ್ಪಿಫ್ರೆಶ್ ಟಿಆರ್ ಹಾಗೂ ರಿಲೈಫ್ ಕೆಮ್ಮಿನ ಸಿರಪ್‌ಗಳನ್ನು ಮಾರುಕಟ್ಟೆಗಳಿಂದ ವಾಪಸು ತರಿಸಿಕೊಳ್ಳಲಾಗಿದೆ ಹಾಗೂ ಈ ಸಿರಪ್‌ಗಳ ತಯಾರಿಕೆಯನ್ನು ನಿಲ್ಲಿಸುವಂತೆ ಸಂಬಂಧಿಸಿದ ಕಂಪನಿಗಳಿಗೆ ಆದೇಶಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ (ಡಬ್ಲುಎಚ್‌ಒ) ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು (ಸಿಡಿಎಸ್‌ಸಿಒ) ತಿಳಿಸಿದೆ.
ಇವುಗಳ ಪೈಕಿ ಯಾವ ಸಿರಪ್‌ಅನ್ನು ಕೂಡ ಇತರ ದೇಶಗಳಿಗೆ ರಫ್ತು ಮಾಡಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ ಸಿಡಿಎಸ್‌ಸಿಒ ಬುಧವಾರ ತಿಳಿಸಿದೆ.
ಮಕ್ಕಳ ಸಾವಿಗೆ ಕಾರಣವಾಗಿದೆ ಎನ್ನಲಾದ ಕೆಮ್ಮಿನ ಸಿರಪ್‌ಗಳನ್ನು ವಿದೇಶಗಳಿಗೆ ರಫ್ತು ಮಾಡಲಾಗಿದೆಯೇ ಎಂಬ ಮಾಹಿತಿ ನೀಡುವಂತೆ ವಿಶ್ವ ಆರೋಗ್ಯ ಸಂಸ್ಥೆಯು ಭಾರತಕ್ಕೆ ಸೂಚಿಸಿತ್ತು. ಹೀಗಾಗಿ ಈ ಮಾಹಿತಿ ಒದಗಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಮಧ್ಯಪ್ರದೇಸ ಹಾಗೂ ರಾಜಸ್ಥಾನದಲ್ಲಿ ಸಂಭವಿಸಿದ ಮಕ್ಕಳ ಸಾವುಗಳ ಕುರಿತು ಇತ್ತೀಚಿಗೆ ಭಾರತದ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿವೆ. ಹೀಗಾಗಿ, ಈ ಕುರಿತು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದೂ ಡಬ್ಲುಎಚ್‌ಒ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.