ADVERTISEMENT

ಕೊರೋನಾ ವೈರಸ್ ಕೊನೆಗಾಣಿಸಲು ಸಾಧ್ಯವಿಲ್ಲ: ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿ

ಪಿಟಿಐ
Published 20 ಜನವರಿ 2022, 1:14 IST
Last Updated 20 ಜನವರಿ 2022, 1:14 IST
ಕೋವಿಡ್ 19 ಸೋಂಕು ಕುರಿತು ಜಾಗತಿಕ ಕಳವಳ ಸೃಷ್ಟಿ
ಕೋವಿಡ್ 19 ಸೋಂಕು ಕುರಿತು ಜಾಗತಿಕ ಕಳವಳ ಸೃಷ್ಟಿ   

ನವದೆಹಲಿ: ಕೋವಿಡ್–19 ಸೋಂಕನ್ನು ಸಂಪೂರ್ಣವಾಗಿ ತೊಡೆದುಹಾಕಲು ಸಾಧ್ಯವಿಲ್ಲ. ಅಂತಹ ವೈರಸ್‌ಗೆ ಕೊನೆಯೆಂಬುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಮಂಗಳವಾರ ಹೇಳಿಕೆ ನೀಡಿದ್ದಾರೆ.

ಆದರೆ ಸೂಕ್ತ ಕ್ರಮಗಳನ್ನು ಮತ್ತು ಈಗಾಗಲೇ ವಿಧಿಸಿರುವ ನಿರ್ಬಂಧಗಳನ್ನು ಸರಿಯಾಗಿ ಪಾಲಿಸಿದರೆ ಈ ವರ್ಷದ ಕೊನೆಯಲ್ಲಿ ತುರ್ತು ಆರೋಗ್ಯ ಪರಿಸ್ಥಿತಿಯನ್ನು ಕೊನೆಗೊಳಿಸಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ಆನ್‌ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿ ಮೈಕೆಲ್ ರಾನ್, ಲಸಿಕೆ ಕಾರ್ಯಕ್ರಮವನ್ನು ಮತ್ತಷ್ಟು ಹೆಚ್ಚಿಸುವುದು ಹಾಗೂ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡುವ ಮೂಲಕ ಕೋವಿಡ್–19 ನಿಯಂತ್ರಿಸಬಹುದು ಎಂದಿದ್ದಾರೆ.

ADVERTISEMENT

ಹಾಗೆ ಮಾಡಿದರೆ ಮಾತ್ರ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ನಿಲ್ಲಿಸಬಹುದು ಮತ್ತು ಕೋವಿಡ್ ಕೊನೆಗಾಣಿಸಬಹುದು ಎನ್ನುವುದು ನನ್ನ ಅಭಿಪ್ರಾಯವಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.