ADVERTISEMENT

ಭಯೋತ್ಪಾದನೆ ಬೆಂಬಲಿಸುವ ಪಾಕ್‌ ಪಾತ್ರದ ಬಗ್ಗೆ ಇಡೀ ಜಗತ್ತಿಗೆ ತಿಳಿದಿದೆ: ಭಾರತ

ಪಿಟಿಐ
Published 29 ಅಕ್ಟೋಬರ್ 2020, 16:42 IST
Last Updated 29 ಅಕ್ಟೋಬರ್ 2020, 16:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ಪಾತ್ರದ ಬಗ್ಗೆ ಇಡೀ ಜಗತ್ತಿಗೇ ಗೊತ್ತಿದೆ. ಅದನ್ನು ನಿರಾಕರಿಸುವ ಪಾಕಿಸ್ತಾನದ ಪ್ರಯತ್ನಗಳಿಂದ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.

ಭಯೋತ್ಪಾದಕ ದಾಳಿಗೆ ತನ್ನ ಭೂಪ್ರದೇಶವನ್ನು ಬಳಕೆಯಾಗದೇ ಇರುವುದನ್ನು ಖಚಿತಪಡಿಸುವಂತೆಯೂ ಮತ್ತು ಮುಂಬೈ, ಉರಿ ಮತ್ತು ಪಠಾಣ್‌ಕೋಟ್‌ನಲ್ಲಿ ನಡೆದ ದಾಳಿಯ ರುವಾರಿಗಳನ್ನು ತ್ವರಿತವಾಗಿ ವಿಚಾರಣೆಗೆ ಒಳಪಡಿಸುವಂತೆಯು ಭಾರತ-ಅಮೆರಿಕ ಜಂಟಿ ಹೇಳಿಕೆಮೂಲಕ ಪಾಕಿಸ್ತಾನವನ್ನು ಒತ್ತಾಯಿಸಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ, 'ತನಗೆ ಸಂಬಂಧಿಸಿದ ಭಾರತ ಮತ್ತು ಅಮೆರಿಕದ ಜಂಟಿ ಹೇಳಿಕೆಯೂ ಅನಗತ್ಯ ಮತ್ತು ಅಸಂಬದ್ಧ,' ಎಂದು ಹೇಳಿತ್ತು.

ಈ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆ ವಕ್ತಾರ ಶ್ರೀವಾಸ್ತವ'ವಿಶ್ವಸಂಸ್ಥೆಯಿಂದ ನಿಷೇಧಿಸಲ್ಪಟ್ಟ ಉಗ್ರರನ್ನು ಗರಿಷ್ಠ ಸಂಖ್ಯೆಯಲ್ಲಿ ಹೊಂದಿರುವ ರಾಷ್ಟ್ರ, ಕಡೆಗೆ ತಾನು ಸಂತ್ರಸ್ತ ರಾಷ್ಟ್ರವೆಂದು ಬಿಂಬಿಸಿಕೊಳ್ಳುವ ಪ್ರಯತ್ನವನ್ನೂ ಮಾಡಬಾರದು,' ಎಂದು ಮೂದಲಿಸಿದರು.

ಅಲ್ಲದೆ, ಭಯೋತ್ಪಾದನೆಯನ್ನು ಬೆಂಬಲಿಸುವ ಪಾಕಿಸ್ತಾನದ ಪಾತ್ರದ ಬಗ್ಗೆ ಇಡೀ ಜಗತ್ತಿಗೇ ಸತ್ಯ ಗೊತ್ತಿದೆ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.