ADVERTISEMENT

ಗೋವಾ: ವಿಧವೆಯರಿಗೆ ಮಾಸಿಕ ₹4 ಸಾವಿರ ಆರ್ಥಿಕ ನೆರವು

ಪಿಟಿಐ
Published 2 ಜುಲೈ 2025, 11:41 IST
Last Updated 2 ಜುಲೈ 2025, 11:41 IST
<div class="paragraphs"><p>ಮುಖ್ಯಮಂತ್ರಿ ಪ್ರಮೋದ್ ಸಾವಂತ್&nbsp;</p></div>

ಮುಖ್ಯಮಂತ್ರಿ ಪ್ರಮೋದ್ ಸಾವಂತ್ 

   

ಪಣಜಿ: 21 ವರ್ಷದೊಳಗಿನ ಮಕ್ಕಳಿರುವ ವಿಧವೆಯರಿಗೆ ಮಾಸಿಕ ₹4 ಸಾವಿರ ಆರ್ಥಿಕ ನೆರವು ನೀಡುವುದಾಗಿ ಗೋವಾ ಸರ್ಕಾರ ಬುಧವಾರ ತಿಳಿಸಿದೆ.

ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಸಮ್ಮುಖದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಸುಭಾಷ್ ಫಾಲ್ ದೇಸಾಯಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಹೊಂದಿರುವ ವಿಧವೆಯರಿಗೆ ಸಹಾಯ ಮಾಡುವ ಉದ್ದೇಶದಿಂದ ಯೋಜನೆಗೆ ತಿದ್ದುಪಡಿ ತರಲಾಗಿದೆ’ ಎಂದರು.

ADVERTISEMENT

‘ಇಲ್ಲಿಯವರೆಗೆ, ವಿಧವೆಯರು ಗೃಹ ಆಧಾರ್ ಪಿಂಚಣಿ ಯೋಜನೆಯಡಿ ಮಾಸಿಕ ₹1,500 ಪಡೆಯಲು ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬೇಕಾಗಿತ್ತು. ವಿಧವಾ ವೇತನವಾಗಿ ಮಾಸಿಕ ₹2,500 ಪಡೆಯಲು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮತ್ತೊಂದು ಅರ್ಜಿಯನ್ನು ಸಲ್ಲಿಸಬೇಕಾಗಿತ್ತು. ಆದರೆ, ಇದೀಗ ಎರಡು ಯೋಜನೆಗಳನ್ನು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ತರಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.