ADVERTISEMENT

ಕೇರಳದ ರೆಸಾರ್ಟ್‌ನಲ್ಲಿ ಕಾಡಾನೆ ದಾಳಿಗೆ ಸಿಲುಕಿದ್ದ ಉಪನ್ಯಾಸಕಿ ಸಾವು

ಪಿಟಿಐ
Published 24 ಜನವರಿ 2021, 7:38 IST
Last Updated 24 ಜನವರಿ 2021, 7:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವಯನಾಡ್‌: ಕೇರಳದ ವಯನಾಡ್‌ ಜಿಲ್ಲೆಯ ಮೆಪ್ಪಾಡಿಯಲ್ಲಿ ಆನೆ ದಾಳಿಯಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಮೆಪ್ಪಾಡಿಯ ‘ರೈನ್‌ ಫಾರೆಸ್ಟ್‌ ರೆಸಾರ್ಟ್‌‘ನಲ್ಲಿ ಈ ಘಟನೆ ನಡೆದಿದೆ.

ಕಣ್ಣೂರು ಮೂಲದ ಉಪನ್ಯಾಸಕಿ ಸಹಾನಾ ಎಂಬುವರು ತಮ್ಮ ಕುಟುಂಬದ ಇಬ್ಬರು ಸದಸ್ಯರೊಂದಿಗೆ ರೆಸಾರ್ಟ್‌ಗೆ ಬಂದಿದ್ದರು. ಈ ವೇಳೆ ಅವರು ಟೆಂಟ್‌ವೊಂದರಲ್ಲಿ ತಂಗಿದ್ದರು.

ADVERTISEMENT

‘ಆನೆಯ ಶಬ್ಧ ಕೇಳಿ ಸಹಾನಾ ಮತ್ತು ಅವರ ಕುಟುಂಬದ ಸದಸ್ಯರಿಬ್ಬರು ಟೆಂಟ್‌ನಿಂದ ಹೊರ ಬಂದಿದ್ದಾರೆ. ಈ ವೇಳೆ ಕಾಡಾನೆಯೊಂದು ಅವರ ಮೇಲೆ ದಾಳಿ ನಡೆಸಿದೆ. ಕುಟುಂಬದ ಸದಸ್ಯರು ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ ಸಹಾನಾ ಆನೆಯ ದಾಳಿಗೆ ಒಳಗಾದರು’ ಎಂದು ಪೊಲೀಸರು ಮಾಹಿತಿ ನೀಡಿದರು.

‘ಸಹಾನಾ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು’ ಎಂದು ಅವರು ತಿಳಿಸಿದರು.

ವಯನಾಡ್‌ ಜಿಲ್ಲಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಕಾಡಾನೆ ದಾಳಿಯ ಬಗ್ಗೆ ಆದಷ್ಟು ಬೇಗ ವರದಿ ಸಲ್ಲಿಸುವಂತೆ ತಹಶೀಲ್ದಾರ್‌ಗೆ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.