ರೆಡ್ ಸ್ಯಾಂಡ್ ಬೋವಾ
Credit: iStock Photo
ಮುಂಬೈ: ನಗರದ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೀನ್ಯಾದ ರೆಡ್ ಸ್ಯಾಂಡ್ ಬೋವಾ ಮತ್ತು ಹೊಂಡುರಾನ್ ಹಾವುಗಳು ಸೇರಿದಂತೆ 16 ಜೀವಂತ ಹಾವುಗಳನ್ನು ರಕ್ಷಣೆ ಮಾಡಿದ್ದು, ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬ್ಯಾಂಕಾಕ್‌ನಿಂದ ಮುಂಬೈಗೆ ಆಗಮಿಸಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯು ಕೀನ್ಯಾದ ಮರಳು ಬೋವಾಗಳು, ಐದು ಕೇರೆ ಹಾವು (ರ‍್ಯಾಟ್ ಸ್ನೇಕ್), ಮೂರು ಅಲ್ಬಿನೊ ಹಾವು, ಎರಡು ಹೊಂಡುರಾನ್ ಹಾವು, ಒಂದು ಕ್ಯಾಲಿಫೋರ್ನಿಯಾ ಕಿಂಗ್ಸ್‌ನೇಕ್, ಎರಡು ಗಾರ್ಟರ್ ಹಾವು ಸೇರಿದಂತೆ 16 ಜೀವಂತ ಹಾವುಗಳನ್ನು ಸಾಗಾಟ ಮಾಡುತ್ತಿದ್ದ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆಯ ನಿಬಂಧನೆಗಳ ಪ್ರಕಾರ, ಕಸ್ಟಮ್ಸ್ ಮತ್ತು ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೊ ವಶಪಡಿಸಿಕೊಂಡ ಪ್ರಾಣಿಗಳನ್ನು ಮೂಲ ದೇಶಕ್ಕೆ ವಾಪಸ್ ಕಳುಹಿಸುತ್ತದೆ. ರೆಸ್ಕಿಂಕ್ ಅಸೋಸಿಯೇಷನ್ ಫಾರ್ ವೈಲ್ಡ್‌ಲೈಫ್ ವೆಲ್ಫೇರ್ (RAWW) ತಜ್ಞರು ಪ್ರಾಣಿಗಳನ್ನು ರಕ್ಷಿಸಲು ಸಹಾಯ ಮಾಡಿದರು ಎಂದು ಅವರು ಮಾಹಿತಿ ನೀಡಿದ್ದಾರೆ.
ಈಚೆಗೆ ಬ್ಯಾಂಕಾಕ್‌ನಿಂದ ಮುಂಬೈಗೆ ಆಗಮಿಸಿದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಅವರ ಬಳಿ ಇದ್ದ ಕಂದು ಬೆಸಿಲಿಸ್ಕ್ ಹಲ್ಲಿಗಳು, ಇಗ್ವಾನಾಗಳು, ಮೊಲಗಳು ಸೇರಿದಂತೆ 120 ಜೀವಂತ ಪ್ರಾಣಿಗಳನ್ನು ರಕ್ಷಣೆ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.