ADVERTISEMENT

ಎಲ್ಲ ಪಕ್ಷಗಳೂ ಸಮ್ಮತಿಸಿದರೆ ಜಾತಿ ಗಣತಿಗೆ ಒಪ್ಪಿಗೆ: ಮಮತಾ ಬ್ಯಾನರ್ಜಿ

ಪಿಟಿಐ
Published 24 ಆಗಸ್ಟ್ 2021, 3:22 IST
Last Updated 24 ಆಗಸ್ಟ್ 2021, 3:22 IST
ಮಮತಾ ಬ್ಯಾನರ್ಜಿ (ಪಿಟಿಐ ಚಿತ್ರ)
ಮಮತಾ ಬ್ಯಾನರ್ಜಿ (ಪಿಟಿಐ ಚಿತ್ರ)   

ಕೋಲ್ಕತ್ತ: ಎಲ್ಲ ರಾಜಕೀಯ ಪಕ್ಷಗಳೂ ಸಮ್ಮತಿಸಿದರೆ ಜಾತಿ ಗಣತಿಯನ್ನು ಒಪ್ಪಿಕೊಳ್ಳುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ 10 ಪಕ್ಷಗಳ ನಿಯೋಗವು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಜಾತಿ ಗಣತಿಗಾಗಿ ಒತ್ತಾಯಿಸಿದ ಬೆನ್ನಲ್ಲೇ ಮಮತಾ ಈ ಹೇಳಿಕೆ ನೀಡಿದ್ದಾರೆ.

‘ಚರ್ಚೆ ನಡೆದು ಒಮ್ಮತ ಮೂಡಿತು ಎಂದಾದರೆ ನನಗೆ ಅದರಲ್ಲಿ ಯಾವ ತಕರಾರೂ ಇಲ್ಲ. ಎಲ್ಲ ರಾಜಕೀಯ ಪಕ್ಷಗಳು ಮತ್ತು ರಾಜ್ಯಗಳು ಸಮ್ಮತಿ ಸೂಚಿಸಿದರೆ ನಾನು ಅದರ ವಿರುದ್ಧ ಹೋರಾಡಲಾರೆ. ರಾಜಕೀಯ ಪಕ್ಷಗಳು, ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸರ್ಕಾರ ಒಮ್ಮತಕ್ಕೆ ಬರಲಿ’ ಎಂದು ಅವರು ಹೇಳಿದ್ದಾರೆ.

ಭಾವನೆಗಳು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಭಿನ್ನವಾಗಿರುತ್ತವೆ ಎಂದ ಅವರು ಈ ವಿಷಯದ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

‘ನಿತೀಶ್ ಅವರು ಈ ವಿಚಾರದಲ್ಲಿ (ಜಾತಿ ಗಣತಿ) ತಮ್ಮ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಇತರರು ಅದಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂದು ನೋಡೋಣ’ ಎಂದು ಮಮತಾ ಹೇಳಿದ್ದಾರೆ.

ಜಾತಿ ಆಧಾರಿತ ಜನಗಣತಿಯು ಅಭಿವೃದ್ಧಿ ಯೋಜನೆಯನ್ನು ರೂಪಿಸುವಲ್ಲಿ ನೆರವಾಗಲಿದೆ ಎಂದು ಪ್ರಧಾನಿ ಭೇಟಿ ಬಳಿಕ ನಿತೀಶ್‌ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.