ADVERTISEMENT

ಮುಸ್ಲಿಮರ ಬಗ್ಗೆ ಬಿಜೆಪಿಯ ನಕಾರಾತ್ಮಕ ಧೋರಣೆ ಬದಲಾಗಲಿದೆಯೇ? -ಮಾಯಾವತಿ

ಪಿಟಿಐ
Published 23 ಸೆಪ್ಟೆಂಬರ್ 2022, 9:13 IST
Last Updated 23 ಸೆಪ್ಟೆಂಬರ್ 2022, 9:13 IST
ಮಾಯಾವತಿ
ಮಾಯಾವತಿ   

ಲಖನೌ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಮಸೀದಿಗೆ ಭೇಟಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಉತ್ತರದ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, ಇದರಿಂದ ಮುಸ್ಲಿಮರ ಬಗ್ಗೆ ಬಿಜೆಪಿಯ ನಕಾರಾತ್ಮಕ ಧೋರಣೆ ಬದಲಾಗಲಿದೆಯೇ ಎಂದು ಪ್ರಶ್ನಿಸಿದ್ದಾರೆ.

ಗುರುವಾರ ದೆಹಲಿಯ ಮಸೀದಿಯಲ್ಲಿ ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸಿ ಅವರನ್ನು ಮೋಹನ್ ಭಾಗವತ್ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ವೇಳೆ ಭಾಗವತ್ ಅವರನ್ನು ರಾಷ್ಟ್ರಪಿತ ಎಂದು ಉಮರ್ ಅಹ್ಮದ್ ಇಲ್ಯಾಸಿ ಬಣ್ಣಿಸಿದ್ದರು.

ಇದನ್ನೂ ಓದಿ:

ADVERTISEMENT

ಮುಸ್ಲಿಮರು ಹಾಗೂ ಮದರಸಾಗಳನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ವರಿಷ್ಠೆ ಕೂಡ ಆಗಿರುವ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.

ತೆರೆದ ಜಾಗದಲ್ಲಿ ಕೆಲವು ನಿಮಿಷ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ಉತ್ತರ ಪ್ರದೇಶದ ಸರ್ಕಾರದಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಮೋಹನ್ ಭಾಗವತ್ ಮೌನ ತಾಳಿರುವ ಹಿಂದಿನ ಮರ್ಮವೇನು ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.