ADVERTISEMENT

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸೋಲಿಸುತ್ತೇವೆ: ರಾಮ್‌ ಮಾಧವ್‌ 

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 2:36 IST
Last Updated 9 ಮಾರ್ಚ್ 2020, 2:36 IST
   

ಗುವಾಹಟಿ:ಪಶ್ಚಿಮ ಬಂಗಾಳದಲ್ಲಿ ಮುಂಬುರುವ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯನ್ನು ಸೋಲಿಸುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ತಿಳಿಸಿದ್ದಾರೆ.

ಇಲ್ಲಿನ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಗೆಲ್ಲುವ ವಿಶ್ವಾಸವಿದೆ, ಈ ಬಾರಿ ಮಮತಾ ಬ್ಯಾನರ್ಜಿಯನ್ನು ಸೋಲಿಸಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ 2021ಕ್ಕೆ ವಿಧಾನಸಭೆ ಚುನಾವಣೆ ನಡೆತಯುವ ಸಾಧ್ಯತೆಗಳಿವೆ.

ADVERTISEMENT

ಮಾರ್ಚ್‌ ತಿಂಗಳ ಮೊದಲ ವಾರದಲ್ಲಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳವನ್ನು ಅಭಿವೃದ್ಧಿಪಡಿಸಲಾಗುವುದು (ಬಂಗಾರದ ಬಂಗಾಳ) ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.