ADVERTISEMENT

ಕೋವಿಡ್‌ ಮೂಲದ ಆರ್ಥಿಕ ಸಂಕಷ್ಟ ಭಗವಂತನ ಆಟ ಎಂಬ ನಿರ್ಮಲಾ ಹೇಳಿಕೆಗೆ ಚಿದಂಬರಂ ಟೀಕೆ

ನಿರ್ಮಲಾ ಸೀತಾರಾಮನ್‌ ಹೇಳಿಕೆಗೆ ಟೀಕೆ

ಪಿಟಿಐ
Published 29 ಆಗಸ್ಟ್ 2020, 6:58 IST
Last Updated 29 ಆಗಸ್ಟ್ 2020, 6:58 IST
ಪಿ. ಚಿದಂಬರಂ
ಪಿ. ಚಿದಂಬರಂ   

ನವದೆಹಲಿ: ‘ಕೋವಿಡ್‌–19 ಸಾಂಕ್ರಾಮಿಕ ಕಾಯಿಲೆ ‘ಭಗವಂತನ ಆಟ’. ಇದು ಅನಿರೀಕ್ಷಿತ ನಷ್ಟವನ್ನುಂಟು ಮಾಡಿದ್ದು, ಪ್ರಸಕ್ತ ಆರ್ಥಿಕತೆ ಮೇಲೆ ಅಪಾರ ಪರಿಣಾಮ ಬೀರಿದೆ' ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿಕೆಯನ್ನು ಹಿರಿಯ ಕಾಂಗ್ರೆಸ್‌ ಮುಖಂಡ ಪಿ. ಚಿದಂಬರಂ ಟೀಕಿಸಿದ್ದಾರೆ.

’ಕೊರೊನಾ ವೈರಸ್‌ ಸಾಂಕ್ರಾಮಿಕ ಹಬ್ಬುವ ಮುನ್ನವೇ ಆರ್ಥಿಕತೆ ಹದಗೆಟ್ಟಿದ್ದ ಬಗ್ಗೆ ಹಣಕಾಸು ಸಚಿವರು ಉತ್ತರ ನೀಡುತ್ತಾರೆಯೇ’ ಎಂದು ಪ್ರಶ್ನಿಸಿದ್ದಾರೆ.

‘2017–18, 2018–19 ಮತ್ತು 2019–20ರ ಹಣಕಾಸು ವರ್ಷಗಳಲ್ಲಿನ ಆರ್ಥಿಕ ಪರಿಸ್ಥಿತಿಯನ್ನು ಅಸಮರ್ಪಕವಾಗಿ ನಿರ್ವಹಿಸಲಾಗಿತ್ತು. ದೇವರ ಸಂದೇಶ ದೂತರಾಗಿರುವ ಹಣಕಾಸು ಸಚಿವರು ಈ ಬಗ್ಗೆ ಉತ್ತರ ನೀಡುತ್ತಾರೆಯೇ’ ಎಂದು ಕೇಳಿದ್ದಾರೆ.

ADVERTISEMENT

‘ಜಿಎಸ್‌ಟಿ ವಿಷಯದಲ್ಲೂ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ರಾಜ್ಯ ಸರ್ಕಾರಗಳಿಗೆ ದೊರೆಯಬೇಕಾದ ಪಾಲು ನೀಡುತ್ತಿಲ್ಲ’ ಎಂದು ಚಿದಂಬರಂ ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.