ADVERTISEMENT

ಶಬರಿಮಲೆ ಇತ್ಯರ್ಥ ಬಳಿಕ ಸಿಎಎ ಅರ್ಜಿಗಳ ವಿಚಾರಣೆ: ಸುಪ್ರೀಂ ಕೋರ್ಟ್

ಪಿಟಿಐ
Published 5 ಮಾರ್ಚ್ 2020, 19:45 IST
Last Updated 5 ಮಾರ್ಚ್ 2020, 19:45 IST
   

ನವದೆಹಲಿ: ಶಬರಿಮಲೆ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಬಳಿಕವಷ್ಟೇ ಪೌರತ್ವ (ತಿದ್ದುಪಡಿ) ಕಾಯ್ದೆಗೆ (ಸಿಎಎ) ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

‘ಸಿಎಎ ಕುರಿತ ಅರ್ಜಿಗಳನ್ನು ತುರ್ತಾಗಿ ವಿಚಾರಣೆ ನಡೆಸಬೇಕು’ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ನೇತೃತ್ವದ ಪೀಠಕ್ಕೆ ಕೋರಿದರು.

ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈವರೆಗೆ ಒಂದು ಪ್ರತಿಕ್ರಿಯೆಯನ್ನೂ ಸಲ್ಲಿಸಿಲ್ಲ ಎಂದು ಇದೇ ವೇಳೆ ಅವರು ಹೇಳಿದರು.

ADVERTISEMENT

ಇದಕ್ಕೆ ಉತ್ತರಿಸಿದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಕೇಂದ್ರ ಸರ್ಕಾರ ಕೆಲವೇ ದಿನಗಳಲ್ಲಿ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲಿದೆ ಎಂದರು.

ಒಂಬತ್ತು ಸದಸ್ಯರ ನ್ಯಾಯಪೀಠ, ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಮರುಪರಿಶೀಲನೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.