ADVERTISEMENT

ಪ್ರಧಾನಿ ಮೋದಿ ವಿರುದ್ಧ 2024ರಲ್ಲಿ ವಾರಾಣಸಿಯಿಂದ ಮಮತಾ ಸ್ಪರ್ಧೆ?

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 9:59 IST
Last Updated 2 ಏಪ್ರಿಲ್ 2021, 9:59 IST
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ   

ಕೋಲ್ಕತ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದಿರುವ ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿದ್ದಾರೆ.

ಅದಕ್ಕೂ ಬದಲಾಗಿ ಈ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನುಡವಣ ನೇರ ಸ್ಪರ್ಧೆ ಎಂಬಂತೆ ಬಿಂಬಿತವಾಗಿದ್ದು, ಮುಂದಿನ 2024ರ ಲೋಕಸಭಾ ಚುನಾವಣೆಯಲ್ಲಿ ಮೋದಿ ವಿರುದ್ಧವೇ ವಾರಾಣಸಿಯಲ್ಲಿ ಸ್ಪರ್ಧಿಸಲು ತೃಣಮೂಲ ಕಾಂಗ್ರೆಸ್ ಸಿದ್ಧತೆ ನಡೆಸಿದೆ.

ತೃಣಮೂಲ ಕಾಂಗ್ರೆಸ್ ಈ ಬಗ್ಗೆ ಟ್ವೀಟ್ ಮಾಡಿದ್ದು, ನಂದಿಗ್ರಾಮದಲ್ಲಿ ದೀದಿ ಗೆಲುವು ಸಾ‌ಧಿಸಲಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಿಂದಲೇ ಪ್ರಧಾನಿ ಮೋದಿ ವಿರುದ್ಧ ಮಮತಾ ನೇರ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದೆ.

ADVERTISEMENT

ಟಿಎಂಸಿಯ ಸಂಸದೆ ಮಹುವಾ ಮೊಯಿತ್ರಾ ಪ್ರಧಾನಿ ಮೋದಿ ಅವರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮೋದಿ ವಿರುದ್ಧ ಮಮತಾ ಸ್ಪರ್ಧೆಯನ್ನು ಪ್ರಸ್ತಾಪಿಸಿದ್ದಾರೆ.

ಅದರ ಬೆನ್ನಲ್ಲೇ, ಟಿಎಂಸಿ ಲೋಕಸಭೆ ಚುನಾವಣೆಯ ಸ್ಪರ್ಧೆ ಕುರಿತು ಟ್ವೀಟ್ ಮೂಲಕ ಹೇಳಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.