ಅನಂತನಾಗ್ (ಜಮ್ಮು– ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನ ಮರುಸ್ಥಾಪನೆ ಮಾಡುವುದು ವಿಳಂಬವಾದರೆ ತಮ್ಮ ಪಕ್ಷವು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಶನಿವಾರ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಕೊಕೆರ್ನಾಗ್‌ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣೆಯ ಬಳಿಕ ಜನರು ತಮ್ಮ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಬಯಸುತ್ತಿದ್ದಾರೆ. ಆದರೆ ರಾಜ್ಯ ಸ್ಥಾನಮಾನ ಮರುಸ್ಥಾಪನೆ ಮಾಡುವುದು ವಿಳಂಬವಾಗುತ್ತಿರುವುದರಿಂದ ನಮ್ಮ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ನ್ಯಾಷನಲ್ ಕಾನ್ಫರೆನ್ಸ್‌ನ ಶಾಸಕ ಅಲ್ತಾಫ್ ಕಾಲೂ ಅವರನ್ನು ಸಚಿವರಾಗಿ ನೋಡಲು ಜನ ಬಯಸುತ್ತಿದ್ದಾರೆ. ಆದರೆ ರಾಜ್ಯಸ್ಥಾನಮಾನ ಸಿಗದೆ ಇದು ಹೇಗೆ ಸಾಧ್ಯ’ ಎಂದರು.
‘ನಾವು ಕಾಯುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ಹೆಚ್ಚು ಸಮಯ ತೆಗೆದುಕೊಂಡರೆ, ಸುಪ್ರೀಂ ಕೋರ್ಟ್‌ಗೆ ಹೋಗುವುದು ಬಿಟ್ಟು ನಮಗೆ ಬೇರೆ ದಾರಿ ಇಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.