ADVERTISEMENT

ರಾಜ್ಯದ ಸ್ಥಾನಮಾನ ಸಿಗದ ಹೊರತು ಚುನಾವಣೆಯಲ್ಲಿ ಸ್ಪರ್ಧೆ ಇಲ್ಲ: ಒಮರ್ ಅಬ್ದುಲ್ಲಾ

ಪಿಟಿಐ
Published 27 ಜುಲೈ 2020, 12:46 IST
Last Updated 27 ಜುಲೈ 2020, 12:46 IST
ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ   

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣಪ್ರಮಾಣದಲ್ಲಿ ರಾಜ್ಯದ ಸ್ಥಾನಮಾನ ಸಿಗುವವರೆಗೂ ನಾನು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ’ ಎಂದು ನ್ಯಾಷನಲ್‌ ಕಾನ್ಫರೆನ್ಸ್‌(ಎನ್‌ಸಿ) ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

‌‘ನಾನು ಸಶಕ್ತ ವಿಧಾನಸಭೆಯನ್ನು ಹೊಂದಿದ್ದ ರಾಜ್ಯದಲ್ಲಿ ನಾಯಕನಾಗಿದ್ದವನು. ಈಗ ಅಶಕ್ತ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ‘ ಎಂದು ಹೇಳಿದ್ದಾರೆ. ‘ಇದು ಬ್ಲಾಕ್‌ಮೇಲ್‌ ಅಲ್ಲ, ಬೆದರಿಸುವ ಅಸ್ತ್ರವೂ ಅಲ್ಲ. ಇದೊಂದು ಪ್ರತಿಕ್ರಿಯೆ ಅಷ್ಟೇ‘ ಎಂದು ಸ್ಪಷ್ಟಪಡಿಸಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಟೀಕಿಸಿದ ಅವರು, ನಮಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದೆ. ಶಾಂತಿಯಿಂದ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ‘ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.