
ನವದೆಹಲಿ: ‘ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಿಗೊಳಿಸಲು ವಿರೋಧ ಪಕ್ಷಗಳು ಬೆಂಬಲ ನೀಡಬೇಕು’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಅಭಿಯಾನದ ಭಾಗವಾಗಿ ಮಮತಾ ಅವರು ರಾಷ್ಟ್ರ ರಾಜಧಾನಿಯಲ್ಲಿದ್ದಾರೆ.
ಎಸ್‌ಐಆರ್ ಕುರಿತು ಜ್ಞಾನೇಶ್ ಕುಮಾರ್ ಹಾಗೂ ಇತರ ಚುನಾವಣಾ ಆಯುಕ್ತರೊಂದಿಗೆ ನಡೆದ ಸಭೆಯಿಂದ ಮಮತಾ ಬ್ಯಾನರ್ಜಿ ಹೊರನಡೆದ ಮರುದಿನವೇ ಈ ಹೇಳಿಕೆ ನೀಡಿದ್ದಾರೆ.
‘ಜ್ಞಾನೇಶ್ ಕುಮಾರ್ ಅವರು ಅಹಂಕಾರ ಪ್ರದರ್ಶಿಸಿ, ನಮಗೆ ಅವಮಾನ ಮಾಡಿದರು’ ಎಂದು ಆರೋಪಿಸಿದ್ದಾರೆ.
‘ಮತದಾರರ ಪಟ್ಟಿಯಿಂದ ಟಿಎಂಸಿ ಪಕ್ಷದ ಬೆಂಬಲಿಗರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಲಾಗುತ್ತಿದೆ’ ಎಂದೂ ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.