ADVERTISEMENT

ನಾನು ಈಗಲೇ ಲಸಿಕೆ ಪಡೆಯಲಾರೆ: ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌

ಪಿಟಿಐ
Published 4 ಜನವರಿ 2021, 10:50 IST
Last Updated 4 ಜನವರಿ 2021, 10:50 IST
   

ಭೋಪಾಲ್‌: ‘ಆದ್ಯತೆಯ ಗುಂಪುಗಳಿಗೆ ಕೋವಿಡ್‌ ಲಸಿಕೆ ನೀಡಿದ ಬಳಿಕ ನಾನು ಲಸಿಕೆ ಪಡೆಯುತ್ತೇನೆ’ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಸೋಮವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ ಅವರು, ‘ಮಧ್ಯಪ್ರದೇಶದ ಎಲ್ಲಾ ಜಿಲ್ಲೆಗಳು ಲಸಿಕೆಗಾಗಿ ಸಿದ್ಧವಾಗಿದೆ’ ಎಂದು ಹೇಳಿದರು.

‘ಲಸಿಕೆ ನೀಡಲು ಅಗತ್ಯ ಸಿದ್ಧತೆಗಳು ಆಗಿವೆ. ಸದ್ಯ ನಾನು ಲಸಿಕೆ ತೆಗೆದುಕೊಳ್ಳುವುದಿಲ್ಲ. ಆದ್ಯತೆ ಗುಂಪುಗಳಿಗೆ ಪ್ರಥಮ ಪ್ರಾತಿನಿಧ್ಯ. ಬಳಿಕ ನಾನು ಸ್ವೀಕರಿಸುತ್ತೇನೆ’ ಎಂದು ಅವರು ಈ ಸಂಬಂಧ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಆಕ್ಸ್‌ಫರ್ಡ್ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್‌ನ ತುರ್ತು ಮತ್ತು ನಿರ್ಬಂಧಿತ ಬಳಕೆಗೆ ಭಾರತೀಯ ಔಷಧ ನಿಯಂತ್ರಕ ಸಂಸ್ಥೆಯು ಭಾನುವಾರ ಅನುಮೋದನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.