ADVERTISEMENT

BJP ಕಾರ್ಯಸೂಚಿಯಂತೆ ದೆಹಲಿ ಸರ್ಕಾರ ಆಡಳಿತ ನಡೆಸಲಿದೆ: AAP ವಿರುದ್ಧ ರೇಖಾ ಕಿಡಿ

ಪಿಟಿಐ
Published 5 ಮಾರ್ಚ್ 2025, 11:44 IST
Last Updated 5 ಮಾರ್ಚ್ 2025, 11:44 IST
<div class="paragraphs"><p>ರೇಖಾ ಗುಪ್ತಾ </p></div>

ರೇಖಾ ಗುಪ್ತಾ

   

ನವದೆಹಲಿ: ಸ್ತುತ ವಿರೋಧ ಪಕ್ಷದ ಸ್ಥಾನದಲ್ಲಿರುವ ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕರು ತಮ್ಮ ಸರ್ಕಾರದ ಕಾರ್ಯಸೂಚಿಯನ್ನು ನಮಗೆ ನಿರ್ದೇಶಿಸುವ ಅಗತ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ಭರವಸೆಗಳನ್ನು ಈಡೇರಿಸಲು ನಮ್ಮ ಪಕ್ಷ (ಬಿಜೆಪಿ) ಬದ್ಧವಾಗಿದೆ. ಇನ್ನು ಎಷ್ಟು ದಿನಗಳು ಉಳಿದಿವೆ ಎಂಬುದನ್ನು ಯಾರೂ ನಮಗೆ ನೆನಪಿಸುವ ಅಗತ್ಯವಿಲ್ಲ. ನಾವು ನಮ್ಮ ಕಾರ್ಯಸೂಚಿಯಂತೆ ಕೆಲಸ ಮಾಡುತ್ತೇವೆ. ಎಎಪಿ ನಾಯಕರು ನಮಗೆ ನಿರ್ದೇಶನ ನೀಡುವ ಅಗತ್ಯವಿಲ್ಲ’ ಎಂದು ಕಿಡಿಕಾರಿದ್ದಾರೆ.

ADVERTISEMENT

ಮುಂಬರುವ ‘ವಿಕಸಿತ ದೆಹಲಿ ಬಜೆಟ್‌’ ಅನ್ನು ಗಮನದಲ್ಲಿಟ್ಟುಕೊಂಡು ಮಹಿಳಾ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಆರೋಗ್ಯ, ಸುರಕ್ಷತೆ ಮತ್ತು ಆರ್ಥಿಕ ಸಬಲೀಕರಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಂಬರುವ ದೆಹಲಿ ಬಜೆಟ್ ಜನರ ಭರವಸೆಗಳನ್ನು ಈಡೇರಿಸಲಿದೆ ಎಂದು ಪ್ರತಿಪಾದಿಸಿದ ಅವರು, ‘ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾದ ಎಲ್ಲಾ ಭರವಸೆಗಳನ್ನು ಜಾರಿಗೆ ತರುತ್ತೇವೆ ಎಂದು ಪುನರುಚ್ಚರಿಸಿದ್ದಾರೆ.

ಮುಂದಿನ ಮೂರು ದಿನಗಳಲ್ಲಿ ಕೊಳಚೆ ಪ್ರದೇಶಗಳಿಗೆ ಭೇಟಿ ನೀಡಿ ಮಹಿಳೆಯರೊಂದಿಗೆ ಸಂವಾದ ನಡೆಸುತ್ತೇನೆ ಎಂದು ಅವರು ಘೋಷಿಸಿದ್ದಾರೆ.

ಮಹಿಳೆಯರಿಗೆ ಮಾಸಿಕ ₹2,500 ಆರ್ಥಿಕ ನೆರವು ನೀಡುವುದಾಗಿ ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸಲು ಆಡಳಿತಾರೂಢ ಬಿಜೆಪಿ ಸರ್ಕಾರ ವಿಫಲವಾಗಿದೆ. ಈ ಕುರಿತು ಸ್ಪಷ್ಟೀಕರಣ ಬಯಸಿ ವಿರೋಧ ಪಕ್ಷ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಹಾಗೂ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದರು.

ಮಾಜಿ ಮುಖ್ಯಮಂತ್ರಿ ಆತಿಶಿ ಅವರ ನೇತೃತ್ವದಲ್ಲಿ ದೆಹಲಿಯ ಮಂಡಿ ಹೌಸ್ ಮೆಟ್ರೊ ನಿಲ್ದಾಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

'ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಗೆ ನಾಲ್ಕು ದಿನ ಮಾತ್ರ ಬಾಕಿಯಿದೆ. ದೆಹಲಿಯ ಮಹಿಳೆಯರು ಕಾತರದಿಂದ ಕಾಯುತ್ತಿದ್ದಾರೆ. ₹2,500 ಯಾವಾಗ ಸಿಗಲಿದೆ? ಮಾರ್ಚ್ 8ರಂದು ದೆಹಲಿಯ ಎಲ್ಲ ಮಹಿಳೆಯರಿಗೆ ಮೊದಲ ಕಂತು ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಈ ಗ್ಯಾರಂಟಿ ಈಡೇರಿಸಲಾಗುತ್ತದೆಯೇ ಅಥವಾ ಘೋಷಣೆಗಷ್ಟೇ ಸೀಮಿತವಾಗಲಿದೆಯೇ' ಎಂದು ಆತಿಶಿ ಅವರು ಪ್ರಶ್ನಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.