
ಪಿಟಿಐ
ಸಂಸತ್ ಮುಂಗಾರು ಅಧಿವೇಶನ
ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಡಿಸೆಂಬರ್ 1 ರಿಂದ 19ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ.
‘2025ರ ಡಿಸೆಂಬರ್ 1ರಿಂದ 19ರವರಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ’ ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ರಚನಾತ್ಮಕ ಹಾಗೂ ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ.