ADVERTISEMENT

ಜಮ್ಮು ಮತ್ತು ಕಾಶ್ಮೀರ: ಕೋವಿಡ್‌-19 ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 15:46 IST
Last Updated 4 ಏಪ್ರಿಲ್ 2020, 15:46 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ಒಂದೇ ದಿನಕ್ಕೆ 17 ಮಂದಿಗೆ ಕೋವಿಡ್‌ –19 ಸೋಂಕು ದೃಢಪಟ್ಟಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 92ಕ್ಕೆ ಏರಿದೆ.

ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲಾ ಆಸ್ಪತ್ರೆಯಲ್ಲಿ 8, ಶ್ರೀನಗರದ ಎಸ್‌ಕೆಐಎಂಎಸ್‌ ಆಸ್ಪತ್ರೆಯಲ್ಲಿ ಐದು, ಶ್ರೀನಗರದ ಎದೆರೋಗಗಳ ಆಸ್ಪತ್ರೆಯಲ್ಲಿ ಒಂದು, ಉದ್ದಂಪುರ ಜಿಲ್ಲೆಯಲ್ಲಿ ಮೂರು ಪ್ರಕರಣ ದೃಢಪಟ್ಟಿದೆ.

14ರಲ್ಲಿ 9 ಮಂದಿ ಗುಣಮುಖ: ಕೇಂದ್ರಾಡಳಿತ ಪ್ರದೇಶವಾದ ಲಡಾಕ್‌ನಲ್ಲಿ ಈವರೆಗೆ ದೃಢಪಟ್ಟಿದ್ದ ಕೋವಿಡ್‌–19 ಸೋಂಕಿತ 14 ಮಂದಿಯಲ್ಲಿ 9 ರೋಗಿಗಳು ಗುಣಮುಖರಾಗಿದ್ದಾರೆ.

ADVERTISEMENT

ಶನಿವಾರ ಇಬ್ಬರು ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದು, 14 ಸೋಂಕಿತರಲ್ಲಿ ಒಟ್ಟು ಒಂಬತ್ತು ಮಂದಿ ಕಳೆದ 12 ದಿನಗಳಲ್ಲಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಿಗ್ಜಿನ್‌ ಸಂಫೆಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.