ADVERTISEMENT

Covid-19 India Update: ಮಹಾರಾಷ್ಟ್ರದಲ್ಲಿ 85,535 ಸಕ್ರಿಯ ಪ್ರಕರಣಗಳು 

ಏಜೆನ್ಸೀಸ್
Published 3 ಡಿಸೆಂಬರ್ 2020, 16:12 IST
Last Updated 3 ಡಿಸೆಂಬರ್ 2020, 16:12 IST
ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಪ್ರಾತಿನಿಧಿಕ ಚಿತ್ರ (ಪಿಟಿಐ)
ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಪ್ರಾತಿನಿಧಿಕ ಚಿತ್ರ (ಪಿಟಿಐ)   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಕೋವಿಡ್‌–19 ದೃಢಪಟ್ಟ 5,182 ಪ್ರಕರಣಗಳು ದಾಖಲಾಗಿದೆ, ಇದೇ ಅವಧಿಯಲ್ಲಿ 8,066 ಮಂದಿ ಗುಣಮುಖರಾಗಿದ್ದಾರೆ ಹಾಗೂ 115 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 18,37,358 ತಲುಪಿದೆ. ಈ ಪೈಕಿ 17,03,274 ಮಂದಿ ಗುಣಮುಖರಾಗಿದ್ದು, 47,472 ಮಂದಿ ಸಾವಿಗೀಡಾಗಿದ್ದಾರೆ. 85,535 ಸಕ್ರಿಯ ಪ್ರಕರಣಗಳಿವೆ.

ದೆಹಲಿಯಲ್ಲಿ ಕೋವಿಡ್‌–19 ದೃಢಪಟ್ಟ 3,734 ಹೊಸ ಪ್ರಕರಣಗಳು ದಾಖಲಾಗಿದ್ದು, 82 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 5,82,058 ತಲುಪಿದ್ದು, ಪ್ರಸ್ತುತ 29,120 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಪಶ್ಚಿಮ ಬಂಗಾಳದಲ್ಲಿ 3,246 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1,967 ಹೊಸ ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 664 ಪ್ರಕರಣಗಳು, ತಮಿಳುನಾಡಿನಲ್ಲಿ 1,416 ಪ್ರಕರಣಗಳು, ರಾಜಸ್ಥಾನದಲ್ಲಿ 2,016 ಪ್ರಕರಣಗಳು ದಾಖಲಾಗಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಸೋಂಕು ಪ್ರಕರಣಗಳಿಗಿಂತಲೂ, ಚೇತರಿಸಿಕೊಂಡವರ ಸಂಖ್ಯೆಯೇ ಹೆಚ್ಚಿದೆ.

ಒಂದು ದಿನದ ಅವಧಿಯಲ್ಲಿ ಒಟ್ಟು 35,551 ಪ್ರಕರಣಗಳು ದೇಶದಾದ್ಯಂತ ಪತ್ತೆಯಾಗಿದ್ದರೆ, ಈ ಅವಧಿಯಲ್ಲಿ 40,726 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಇನ್ನು ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ ಗುರುವಾರ 95,34,965ಕ್ಕೆ ತಲುಪಿದೆ. 24 ಗಂಟೆಗಳಲ್ಲಿ 526 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,38,648ಗೆ ಏರಿಕೆಯಾಗಿದೆ.

ಸದ್ಯ ದೇಶದಲ್ಲಿ 4,22,943 ಸಕ್ರಿಯ ಪ್ರಕರಣಗಳಿವೆ. ಈ ವರೆಗೆ 89,73,373 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ನಿತ್ಯ ವರದಿಯಾಗುತ್ತಿರುವ ಪ್ರಕರಣಗಳಿಗಿಂತಲೂ ಗುಣಮುಖರಾಗಿ ಬಿಡುಗಡೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಗಮನಾರ್ಹ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.