ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 500 ಸ್ಥಳಗಳಲ್ಲಿ ರಾಷ್ಟ್ರಧ್ವಜಗಳನ್ನು ಸ್ಥಾಪಿಸಲಾಗಿದ್ದು, ದೆಹಲಿಯು ತ್ರಿವರ್ಣಗಳ ನಗರವಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.
75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, ಜನರು ಎಲ್ಲೇ ಹೋದರೂ ರಾಷ್ಟ್ರಧ್ವಜ ಕಾಣಸಿಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ:ದೇಶ ವಿಭಜನೆಯ ಅಮಾನವೀಯ ಅಧ್ಯಾಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ: ಅಮಿತ್ ಶಾ
ನಾವೆಲ್ಲರೂ ಸ್ವಾತಂತ್ರ್ಯದ ಅಮೃತ ಮಹೋತ್ಸವನ್ನು ಆಚರಿಸುತ್ತಿದ್ದೇವೆ. ನಾವು 25 ಲಕ್ಷ ಮಕ್ಕಳಿಗೆ ತ್ರಿವರ್ಣ ಧ್ವಜಗಳನ್ನು ವಿತರಿಸಿದ್ದೇವೆ ಎಂದು ಹೇಳಿದರು.
ಜಗತ್ತಿನಲ್ಲಿ ಭಾರತವನ್ನು ನಂ.1 ರಾಷ್ಟ್ರವನ್ನಾಗಿಸಲು ಎಲ್ಲರೂ ಪಣತೊಡಬೇಕು ಎಂದು ಕೇಜ್ರಿವಾಲ್ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.