ADVERTISEMENT

ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಿರಿ: ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ಪಿಟಿಐ
Published 28 ಜೂನ್ 2021, 3:25 IST
Last Updated 28 ಜೂನ್ 2021, 3:25 IST
ಚಂಡೀಗಡದಲ್ಲಿ ರೈತರಿಂದ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆ (ಪಿಟಿಐ ಸಂಗ್ರಹ ಚಿತ್ರ)
ಚಂಡೀಗಡದಲ್ಲಿ ರೈತರಿಂದ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆ (ಪಿಟಿಐ ಸಂಗ್ರಹ ಚಿತ್ರ)   

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಕೈಬಿಡಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿದೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 7 ತಿಂಗಳು ಪೂರೈಸಿದ್ದ ಈ ಹಿನ್ನೆಲೆಯಲ್ಲಿ ಜೂನ್ 26ರಂದು ರೈತರು ವಿವಿಧ ರಾಜ್ಯಗಳಲ್ಲಿ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಈ ವೇಳೆ ಚಂಡೀಗಡ ಪೊಲೀಸರು ಅನೇಕ ರೈತ ನಾಯಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಮೋರ್ಚಾ ಹೇಳಿದೆ.

ಚಂಡೀಗಡದಲ್ಲಿ ಅನೇಕ ರೈತ ನಾಯಕರ ಮೇಲೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 147, 148, 149, 186, 188, 332 ಮತ್ತು 353ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರತಿಭಟನಾನಿರತರ ಮೇಲೆ ಜಲಫಿರಂಗಿ ಪ್ರಯೋಗ ಮತ್ತು ಲಾಠಿಚಾರ್ಜ್ ಮಾಡಲಾಗಿದೆ ಎಂದೂ ಮೋರ್ಚಾ ದೂರಿದೆ.

ಪ್ರಜಾಪ್ರಭುತ್ವ ವಿರೋಧಿ ಮತ್ತು ಸರ್ವಾಧಿಕಾರಿ ವರ್ತನೆಯಿಂದ ರೈತನಾಯಕರ ಮೇಲೆ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಇದನ್ನು ಖಂಡಿಸುತ್ತೇವೆ ಮತ್ತು ತಕ್ಷಣವೇ ಪ್ರಕರಣಗಳನ್ನು ಹಿಂಪಡೆಯುವಂತೆ ಆಗ್ರಹಿಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.