ADVERTISEMENT

ಕ್ರಮ ಜರುಗಿಸದಿರಲು ಅನುಮತಿ: ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 16:14 IST
Last Updated 16 ಜುಲೈ 2024, 16:14 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಆರೋಪಿಯೊಬ್ಬ ಶಾಸಕನಾಗಿ ಆಯ್ಕೆಯಾಗಿದ್ದಾನೆ ಎಂಬುದೊಂದೇ, ಆತ ಸಾರ್ವಜನಿಕ ವಲಯದಲ್ಲಿ ಒಳ್ಳೆಯ ಹೆಸರು ಹೊಂದಿದ್ದಾನೆ ಎನ್ನಲು ಆಧಾರ ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

1994ರಲ್ಲಿ ನಡೆದ ಅವಳಿ ಕೊಲೆ ಪ್ರಕರಣದ ಆರೋಪಿ ಛೋಟೆ ಸಿಂಗ್ ಅವರು 2007ರಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದ ಕಾರಣಕ್ಕೆ, ಅವರ ವಿರುದ್ಧ ಕ್ರಮ ಕೈಗೊಳ್ಳದೆ ಇರುವುದಕ್ಕೆ ಪೊಲೀಸರಿಗೆ ಅನುಮತಿ ನೀಡಿದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ.

ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಮತ್ತು ಸತೀಶ್‌ಚಂದ್ರ ಶರ್ಮ ಅವರು ಇದ್ದ ವಿಭಾಗೀಯ ಪೀಠವು ಸೋಮವಾರ ಈ ಆದೇಶ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.