ಗುವಾಹಟಿ: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯಲ್ಲಿ ಹ್ಯೂಮನ್ ಮೆಟಾನ್ಯೂಮೋ ವೈರಸ್ (ಎಚ್ಎಂಪಿವಿ) ಸೋಂಕು ಪತ್ತೆಯಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ.
‘ಅವರನ್ನು ಐಸೋಲೇಷನ್‌ನಲ್ಲಿ ಇಡಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ’ ಎಂದು ಆಸ್ಪತ್ರೆಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ಆದರೆ, ಈ ಕುರಿತು ಸರ್ಕಾರದ ಅಧಿಕಾರಿಗಳು ಖಚಿತಪಡಿಸಿಲ್ಲ.
‘ಮಹಿಳೆಯು ಕೆಲವು ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದರು, ನಿರಂತರ ತಪಾಸಣೆ ನಡೆಸಿದ ವೇಳೆ ಎಚ್‌ಎಂಪಿವಿ ಸೋಂಕು ಇರುವುದು ಕಂಡುಬಂದಿದೆ’ ಎಂದು ತಿಳಿಸಿದರು.
ಇದಕ್ಕೂ ಮೊದಲು 10 ತಿಂಗಳ ಮಗುವಿನಲ್ಲಿಯೂ ಕೂಡ ಎಚ್‌ಎಂಪಿವಿ ಸೋಂಕು ಇರುವುದು ಕಂಡುಬಂದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.