ADVERTISEMENT

ಮುಂಬೈ: ಸಾರ್ವಜನಿಕ ಶೌಚಾಲಯದ ಗೋಡೆ ಕುಸಿತ; ಮಹಿಳೆ ಸಾವು

ಪಿಟಿಐ
Published 23 ನವೆಂಬರ್ 2020, 8:44 IST
Last Updated 23 ನವೆಂಬರ್ 2020, 8:44 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಇಲ್ಲಿನ ಕರ್ಲಾ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಸಾರ್ವಜನಿಕ ಶೌಚಾಲಯದ ಗೋಡೆ ಕುಸಿದು 55 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದರು.

ಬೆಳಿಗ್ಗೆ 7.40ರ ಸುಮಾರಿಗೆ ಪಶ್ಚಿಮ ಕುರ್ಲಾದ ನಾಜ್‌ ಹೋಟೆಲ್‌ ಬಳಿಯಿದ್ದ ಸಾರ್ವಜನಿಕ ಶೌಚಾಲಯದ ಗೋಡೆ ಕುಸಿದಿದ್ದು, ಮಹಿಳೆ ಅವಶೇಷಗಳಡಿ ಸಿಲುಕಿದ್ದರು.

‘ಮಹಿಳೆ ಕಾಲು ಕಟ್ಟಡದ ಅವಶೇಷಗಳಡಿ ಸಿಲುಕಿತ್ತು. ಅವರನ್ನು ರಕ್ಷಿಸಿ ತಕ್ಷಣವೇ ರಾಜವಾಡಿ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಮಹಿಳೆ ಆಸ್ಪತ್ರೆಗೆ ತಲುಪುವ ಮುನ್ನವೇ ಸಾವನ್ನಪ್ಪಿದ್ದರು’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.