ADVERTISEMENT

ಮಹಿಳೆಗೆ ಗನ್ ಹಿಡಿದು ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಫಡಣವಿಸ್

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 14:08 IST
Last Updated 4 ಮಾರ್ಚ್ 2021, 14:08 IST
ಪ್ರಾತಿನಿಧಿಕ ಚಿತ್ರ 
ಪ್ರಾತಿನಿಧಿಕ ಚಿತ್ರ    

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ ಗನ್ ಹಿಡಿದು ಪೊಲೀಸ್ ಅಧಿಕಾರಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಮಹಿಳೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಮಹಾರಾಷ್ಟ್ರದ ವಿಪಕ್ಷ ನಾಯಕ ದೇವೇಂದ್ರ ಫಡಣವಿಸ್ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.

ಒಸಮನಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ಕುರಿತಂತೆ ಸರ್ಕಾರ ಪೊಲೀಸ್ ಇಲಾಖೆಯಿಂದ ವಿವರವಾದ ಮಾಹಿತಿ ಕೇಳಿದೆ.

ಇದೇವೇಳೆ, ಅತ್ಯಾಚಾರಕ್ಕೊಳಗಾದ ಮಹಿಳೆ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಎರಡು ಸೂಸೈಡ್ ನೋಟ್‌ಗಳನ್ನು ಫಡಣವಿಸ್ ವಿಧಾನಸಭೆಗೆ ಸಲ್ಲಿಸಿದ್ದಾರೆ.

ADVERTISEMENT

"ಹರಿಭೌ ರಾಮದಾಸ್ ಕೋಲೆಕಾರ್ ಎಂಬ ಪೊಲೀಸ್ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಹಿಳೆ ಡೆತ್ ನೊಟ್‌ನಲ್ಲಿ ಹೆಸರಿಸಿದ್ದಾರೆ" ಈ ಬಗ್ಗೆ ವಿವರವಾದ ತನಿಖೆ ನಡೆಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.