ADVERTISEMENT

ಲಖನೌದ ಆಶ್ರಮದಲ್ಲಿ 52 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ದೂರು ದಾಖಲು

ಪಿಟಿಐ
Published 17 ಅಕ್ಟೋಬರ್ 2022, 2:12 IST
Last Updated 17 ಅಕ್ಟೋಬರ್ 2022, 2:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ಉತ್ತರ ಪ್ರದೇಶದ ರಾಜಧಾನಿ ಲಖನೌದ ಆಶ್ರಮವೊಂದರಲ್ಲಿ 52 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ.

ಈ ಕುರಿತು ಸಂತ್ರಸ್ತ ಮಹಿಳೆ ಲಖನೌ ಪೊಲೀಸರಿಗೆ ದೂರು ನೀಡಿದ್ದು, ನಡೆದಿರುವ ಘಟನೆ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಆಶ್ರಮದ ಮುಖ್ಯಸ್ಥ ಬೆದರಿಕೆ ಹಾಕಿದ್ದಾನೆ ಎಂದೂ ಮಹಿಳೆ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

‘ವಾರಾಣಸಿಯಲ್ಲಿ ಸನ್ಯಾಸಿನಿಯೊಬ್ಬರು ಲಖನೌದ ಆಶ್ರಮದ ಬಗ್ಗೆ ಪರಿಚಯ ಮಾಡಿಕೊಟ್ಟಿದ್ದರು. ಅ.4 ರಂದು ಸಂಜೆ ನಾನು ಆಶ್ರಮದಲ್ಲಿ ಏಕಾಂಗಿಯಾಗಿದ್ದಾಗ ನನಗೆ ಆಹಾರದಲ್ಲಿ ಮತ್ತು ಬರುವ ಔಷಧಿ ಹಾಕಿ ಕೊಟ್ಟಿದ್ದರು. ಎದ್ದು ನೋಡಿದಾಗ ನಾನು ಸಂಪೂರ್ಣ ಬೆತ್ತಲೆಯಾಗಿದ್ದೆ. ಆ ನಂತರ ನನ್ನ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದು ಗೊತ್ತಾಯಿತು’ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

‘ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ವ್ಯಕ್ತಿಯ ಬಂಧನವಾಗಿಲ್ಲ. ಆಶ್ರಮದ ಬಗ್ಗೆ ಭೂ ವಿವಾದವಿದ್ದು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ’ ಎಂದು ಡಿಸಿಪಿ ಪ್ರಾಚಿ ಸಿಂಗ್ ತಿಳಿಸಿದ್ದಾರೆ.

ಲಖನೌದಲ್ಲಿ ಕಳೆದ 24 ಗಂಟೆಯಲ್ಲಿ ವರದಿಯಾದ ಎರಡನೇ ಸಾಮೂಹಿಕ ಅತ್ಯಾಚಾರ ಪ್ರಕರಣ ಇದಾಗಿದೆ. ಭಾನುವಾರ 18 ವರ್ಷದ ಯುವತಿ ಮೇಲೆ ಆಟೋ ಚಾಲಕ ಹಾಗೂ ಆತನ ಸಹಾಯಕ ಅತ್ಯಾಚಾರ ನಡೆಸಿರುವ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.