ಪ್ರಾತಿನಿಧಿಕ ಚಿತ್ರ
ಭುವನೇಶ್ವರ: ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಯುವತಿ ಮೇಲೆ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚೆಗೆ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದ ಘಟನೆಯ ಬಗ್ಗೆ ‘ಸಖಿ‘ ಕೇಂದ್ರದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆಕೆಯನ್ನು ರಕ್ಷಿಸಿ, ಸಖಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಈ ವೇಳೆ ಸಂತ್ರಸ್ತೆ ತನಗೆ ಎದುರಾದ ಸಂಕಷ್ಟವನ್ನು ಹೇಳಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದು, ತಂದೆ ಮಾನಸಿಕ ಅಸ್ವಸ್ಥರಾಗಿದ್ದಾರೆ. ಯುವತಿಯು ನಿರ್ಜನ ಪ್ರದೇಶದ ಮನೆಯೊಂದರಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆ ಬಗ್ಗೆ ಒಡಿಶಾ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಅವರಿಗೆ ಕರೆ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಸಖಿ‘ ಕೇಂದ್ರವು ನೊಂದ ಮಹಿಳೆಯರ ಸಾಂತ್ವನ ಕೇಂದ್ರವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.