ADVERTISEMENT

ಮುಂಬೈ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ

ಪಿಟಿಐ
Published 4 ಡಿಸೆಂಬರ್ 2022, 11:11 IST
Last Updated 4 ಡಿಸೆಂಬರ್ 2022, 11:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: 42 ವರ್ಷ ವಯಸ್ಸಿನ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾದ ಘಟನೆಯು ಇಲ್ಲಿಯ ಕುರ್ಲಾ ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

‘ಮನೆಗೆ ನುಗ್ಗಿದ ಮೂವರು ಪುರುಷರು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆಕೆಯ ಮೇಲೆ ಹರಿತ ಆಯುಧಗಳಿಂದ ಹಲ್ಲೆ ನಡೆಸಿ, ಗುಪ್ತಾಂಗಗಳಿಗೆ ಸಿಗರೇಟ್‌ನಿಂದ ಸುಟ್ಟಿದ್ದಾರೆ. ಅಸಹಜ ರೀತಿಯಲ್ಲಿ ಅವರು ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಆರೋಪಿಗಳಲ್ಲಿ ಒಬ್ಬನುಈ ಕೃತ್ಯದ ವಿಡಿಯೊವನ್ನು ಚಿತ್ರೀಕರಿಸಿದ್ದಾನೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರೆ ವಿಡಿಯೊವನ್ನು ಬಹಿರಂಗಪಡಿಸುವುದಾಗಿಯೂ ಆರೋಪಿಗಳು ಸಂತ್ರಸ್ತೆಯನ್ನು ಬೆದರಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿಗಳು ಒಂದೇ ಪ್ರದೇಶದ ನಿವಾಸಿಗಳು ಎಂದು ಅವರು ತಿಳಿಸಿದ್ದಾರೆ.

ಮಹಿಳೆಯು ತನ್ನ ಮೇಲೆ ಆದ ದೌರ್ಜನ್ಯದ ಕುರಿತು ನೆರೆಯ ಮನೆಯವರಿಗೆ ತಿಳಿಸಿದ್ದರು. ಅವರು ಎನ್‌ಜಿಒ ಒಂದನ್ನು ಸಂಪರ್ಕಿಸಿ ಘಟನೆಯನ್ನು ವಿವರಿಸಿದ್ದರು. ಬಳಿಕ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ನಾಲ್ಕು ಸೆಕ್ಷನ್‌ಗಳ ಅಡಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಸೆರೆ ಹಿಡಿಯಲು ಜಾಲ ರೂಪಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.