ಬಾಂದಾ (ಉತ್ತರಪ್ರದೇಶ) (ಪಿಟಿಐ): ಬಾಂದಾದಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ 8 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
‘ಅತ್ಯಾಚಾರದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ 10 ದಿನಗಳ ಹಿಂದೆ ಹರಿದಾಡಿತ್ತು. ವಿಡಿಯೊದ ನೈಜತೆ ಪರಿಶೀಲಿಸಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ವರದಿ ಆಧಾರದ ಮೇಲೆ 8 ಮಂದಿಯನ್ನು ಗುರುವಾರ ಬಂಧಿಸಲಾಗಿದೆ’ ಎಂದು ಬದೌಸ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
‘ಐಟಿ ಕಾಯ್ದೆ ಅನ್ವಯ ಜುಲೈ 28ರಂದು ಮೊದಲ ಆರೋಪಿ ಕಲ್ಲು ಎಂಬಾತನ ಮೇಲೆ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತೆಯ ವಿಚಾರಣೆ ಇನ್ನಷ್ಟೇ ನಡೆಸಬೇಕಿದೆ’ ಎಂದು ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.