ADVERTISEMENT

ಬಿಹಾರದಲ್ಲಿ ಮಹಿಳೆ ಮೇಲೆ ಏಳು ಜನರಿಂದ ಅತ್ಯಾಚಾರ, ಪುತ್ರನ ಕೊಲೆ

ಪಿಟಿಐ
Published 12 ಅಕ್ಟೋಬರ್ 2020, 10:36 IST
Last Updated 12 ಅಕ್ಟೋಬರ್ 2020, 10:36 IST
ಅತ್ಯಾಚಾರ ಪ್ರಕರಣಗ ವಿರುದ್ಧ ನಡೆದ ಪ್ರತಿಭಟನೆ ವೇಳೆ ಕಂಡು ಬಂದ ಫಲಕ
ಅತ್ಯಾಚಾರ ಪ್ರಕರಣಗ ವಿರುದ್ಧ ನಡೆದ ಪ್ರತಿಭಟನೆ ವೇಳೆ ಕಂಡು ಬಂದ ಫಲಕ    

ಬುಕ್ಸರ್ (ಬಿಹಾರ): 30 ವರ್ಷದ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಏಳು ಜನರು, ಬಳಿಕ ಮಹಿಳೆಯ ಐದು ವರ್ಷದ ಪುತ್ರನನ್ನು ಕೊಂದಿರುವ ಕೃತ್ಯ ಬುಕ್ಸರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯಕ್ಕೆ ಸಂಬಂಧಿಸಿದಂತೆ ಮುನ್ನಿ ರಾಮ್‌ ಎಂಬಾತನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಇತರರಿಗಾಗಿ ಶೋಧ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಲು ಬಂದಿದ್ದ ಮಹಿಳೆಯನ್ನು ಆರೋಪಿಗಳು ಚೈಗೇನ್‌ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಬಾಲಕನನ್ನು ಕೊಂದಿದ್ದಾರೆ ಎಂದು ಮುರರ್ ಠಾಣೆಗೆ ನೀಡಿರುವ ದೂರಿನಲ್ಲಿ ಮಹಿಳೆಯ ತಂದೆ ತಿಳಿಸಿದ್ದಾರೆ.

ADVERTISEMENT

ಕೃತ್ಯದ ಬಳಿಕ ಆರೋಪಿಗಳು ಮಹಿಳೆ ಮತ್ತು ಆಕೆಯ ಪುತ್ರನನ್ನು ಹಗ್ಗದಿಂದ ಕಟ್ಟಿಹಾಕಿದ್ದು, ನಾಲೆಗೆ ಎಸೆದಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇಬ್ಬರನ್ನು ನಾಲೆಯಿಂದ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ವೇಳೆಗೆ ಬಾಲಕ ಮೃತಪಟ್ಟಿದ್ದ. ಮಹಿಳೆಯನ್ನು ಸಾದರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆಯ ವೈದ್ಯಕೀಯ ಪರೀಕ್ಷಾ ವರದಿಯನ್ನು ನಿರೀಕ್ಷಿಸಲಾಗಿದೆ. ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.