ADVERTISEMENT

ಮಧ್ಯ ಪ್ರದೇಶ: ಗಂಡನ ಎದುರೇ 35 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಐಎಎನ್ಎಸ್
Published 28 ಡಿಸೆಂಬರ್ 2021, 8:40 IST
Last Updated 28 ಡಿಸೆಂಬರ್ 2021, 8:40 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಭೋಪಾಲ್: 35 ವರ್ಷದ ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಮತ್ತು ಆಕೆಯ ಪತಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಶನಿವಾರ ರಾತ್ರಿ ಘಟನೆ ನಡೆದಿದೆ. ಧಾರ್ ಜಿಲ್ಲೆಯ ಮನವಾರ್ ಪಟ್ಟಣದಲ್ಲಿರುವ ಬ್ರಿಡ್ಜ್ ಸಮೀಪ ಬಂದಾಗ ಅಪರಿಚಿತರು ಅವರ ಮೇಲೆ ಕಲ್ಲು ತೂರಾಟ ನಡೆಸಿ ಬೈಕ್ ನಿಲ್ಲಿಸಿದ್ದಾರೆ.

ದಂಪತಿಯನ್ನು ತಳ್ಳಿ, ಪತಿಯನ್ನು ಮರಕ್ಕೆ ಕಟ್ಟಿದ್ದಾರೆ ಮತ್ತು ಆತನ ಬಳಿಯಲ್ಲಿದ್ದ ಪರ್ಸ್ ಮತ್ತು ಒಡವೆಗಳನ್ನು ಕಿತ್ತುಕೊಂಡಿದ್ದಾರೆ. ಮಹಿಳೆಯ ಬಟ್ಟೆಯನ್ನು ಕಳಚಿ ಕ್ರೂರವಾಗಿ ನಡೆದುಕೊಂಡಿದ್ದಾರೆ. ಅತ್ಯಾಚಾರ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಸಹಾಯಕ್ಕಾಗಿ ಅಂಗಲಾಚಿ ಅಳುತ್ತಿದ್ದ ದಂಪತಿಯನ್ನು ಕಂಡ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು, ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. 'ಮಹಿಳೆಯ ಗುಪ್ತಾಂಗದಲ್ಲಿ ಗಂಭೀರ ಗಾಯಗಳಾಗಿದ್ದವು' ಎಂದು ಹೇಳಿದ್ದಾರೆ.

ಘಟನೆ ನಡೆದು ಎರಡು ದಿನಗಳಾದರೂ ಆರೋಪಿಗಳು ಪತ್ತೆಯಾಗಿಲ್ಲ. ಅವರನ್ನು ಬಂಧಿಸಲು ಹಲವು ತಂಡಗಳನ್ನು ರಚಿಸಲಾಗಿದೆ. ನೆರೆಯ ಜಿಲ್ಲೆಗಳಲ್ಲೂ ಆರೋಪಿಗಳಿಗಾಗಿ ಶೋಧಕಾರ್ಯ ಕೈಗೊಳ್ಳಲಾಗಿದೆ' ಎಂದು ಐಎಎನ್‌ಎಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.