ಠಾಣೆ: ಗರ್ಭಿಣಿ ಆಗದಿದ್ದನ್ನೇ ನೆಪಮಾಡಿಕೊಂಡು ಮಹಿಳೆಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಕುಟುಂಬವೊಂದರ ಏಳು ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಮಹಾರಾಷ್ಟ್ರದ ಭಿವಿಂಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಆರೋಪಿಗಳೆಲ್ಲರೂ ಲಾತುರ್, ಕೊಲ್ಹಾಪುರ್ ಮತ್ತು ಬೀದರ್‌ನವರು. ಮಗು ಹೆರದಿದ್ದಕ್ಕಾಗಿ ಮಹಿಳೆಗೆ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸಿಸುತ್ತಿದ್ದರು. ಮಗುವಿಗೆ ಜನ್ಮ ನೀಡದಿದ್ದರೆ ಆಕೆಯ ಗಂಡನಿಗೆ ಬೇರೆ ಮದುವೆ ಮಾಡಿಸುವುದಾಗಿ ಅವರು ಬೆದರಿಸುತ್ತಿದ್ದರು.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498ಎ ಮತ್ತು ಇತರ ಸೆಕ್ಷನ್‌ಗಳ ಅಡಿ ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.