ADVERTISEMENT

ವಿಮಾನ ನಿಲ್ದಾಣದಲ್ಲಿ ಮಹಿಳೆ ಬಳಿ ಗುಂಡು ಪತ್ತೆ: ಬಂಧನ

ಪಿಟಿಐ
Published 6 ಜುಲೈ 2019, 14:10 IST
Last Updated 6 ಜುಲೈ 2019, 14:10 IST
–ಸಾಂದರ್ಭಿಕ ಚಿತ್ರ
–ಸಾಂದರ್ಭಿಕ ಚಿತ್ರ   

ನವದೆಹಲಿ: ಕೋಲ್ಕತ್ತಕ್ಕೆ ಹೊರಟಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿ ಐದು ಗುಂಡುಗಳು ಪತ್ತೆಯಾಗಿದ್ದು, ಅವರನ್ನುಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ವಶಕ್ಕೆ ಪಡೆದಿದೆ.

ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ನಡೆಸುವಾಗ ಮಹಿಳೆಯ ಬ್ಯಾಗ್‌ನಲ್ಲಿ ಗುಂಡುಗಳು ಪತ್ತೆಯಾಗಿವೆ. ಗುಂಡುಗಳನ್ನು ಸಾಗಿಸುತ್ತಿರುವುದಕ್ಕೆ ಮಹಿಳೆ ಸಮರ್ಪಕ ಉತ್ತರ ನೀಡಲಿಲ್ಲ ಎಂದು ಸಿಐಎಸ್‌ಎಫ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT