ಪ್ರಾತಿನಿಧಿಕ ಚಿತ್ರ
ಚಿತ್ರಕೃಪೆ: ಮೆಟಾ ಎಐ
ಹೈದರಾಬಾದ್: ಅತ್ಯಾಚಾರ ಎಸಗಲು ಯತ್ನಿಸುತ್ತಿದ್ದ ವ್ಯಕ್ತಿಯಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬರು ಚಲಿಸುತ್ತಿದ್ದ ರೈಲಿನಿಂದ ಜಿಗಿದು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸರು ಸೋಮವಾರ ತಿಳಿಸಿದ್ದಾರೆ.
‘ಮಾರ್ಚ್ 22ರ ಸಂಜೆ ಸಿಕಂದರಾಬಾದ್ ರೈಲು ನಿಲ್ದಾಣದಿಂದ ಮೇಡ್ಚಲ್‌ಗೆ ಎಂಎಂಟಿಎಸ್ (ಮಲ್ಟಿ ಮಾಡಲ್ ಟ್ರಾನ್ಸ್‌ಪೋರ್ಟ್ ಸರ್ವಿಸ್) ರೈಲಿನ ಮಹಿಳಾ ಬೋಗಿಯಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು 25 ವರ್ಷದ ಅಪರಿಚಿತ ವ್ಯಕ್ತಿ, ತನ್ನ ಬಳಿ ಬಂದು ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದರು. ಆತನಿಂದ ತಪ್ಪಿಸಿಕೊಳ್ಳಲು ರೈಲಿನಿಂದ ಜಿಗಿದೆ’ ಎಂದು 23 ವರ್ಷದ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗಾಯಗೊಂಡಿದ್ದ ಯುವತಿಯನ್ನು ದಾರಿಹೋಕರು ರಕ್ಷಿಸಿ, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದು, ಆರೋಪಿ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.