ADVERTISEMENT

ಇಬ್ಬರು ಮಕ್ಕಳೊಂದಿಗೆ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಮಹಿಳೆ ಆತ್ಮಹತ್ಯೆ

ಪಿಟಿಐ
Published 15 ಜೂನ್ 2022, 2:39 IST
Last Updated 15 ಜೂನ್ 2022, 2:39 IST
ಇಬ್ಬರು ಮಕ್ಕಳೊಂದಿಗೆ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಮಹಿಳೆ ಆತ್ಮಹತ್ಯೆ
ಇಬ್ಬರು ಮಕ್ಕಳೊಂದಿಗೆ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಮಹಿಳೆ ಆತ್ಮಹತ್ಯೆ   

ನವದೆಹಲಿ: ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ಹೋಲಂಬಿ ಕಲನ್ ರೈಲು ನಿಲ್ದಾಣದಲ್ಲಿ ನಡೆದಿದೆ.

ಮಂಗಳವಾರ ಮಧ್ಯಾಹ್ನ 2.13ರ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯ ವಯಸ್ಸು 30ರ ಆಸುಪಾಸಿನಲ್ಲಿದ್ದು, ಮಕ್ಕಳು 5 ಮತ್ತು 10 ವರ್ಷದವರಾಗಿದ್ದಾರೆ.

ADVERTISEMENT

‘ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನಮಗೆ ರೈಲ್ವೆ ಭದ್ರತಾ ನಿಯಂತ್ರಣ ಕೊಠಡಿಯಿಂದ ಕರೆ ಬಂದಿತ್ತು. ತನಿಖಾಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದೆವು. ಹಳಿ ಮೇಲೆ ಒಬ್ಬ ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ’ ಎಂದು ರೈಲ್ವೆ ಡಿಸಿಪಿ ಹರೇಂದರ್ ಕೆ ಸಿಂಗ್ ತಿಳಿಸಿದ್ದಾರೆ..

ತಾಯಿ ಮತ್ತು ಮಕ್ಕಳು ಅಮೃತಸರ ಇಂಟರ್‌ಸಿಟಿ ರೈಲಿನ ಮುಂಭಾಗ ಜಿಗಿದಿದ್ದಾರೆ. ರೈಲು ಅವರ ಮೇಲೆ ಹರಿದಿದೆ. ಅವರ ಗುರುತು ಪತ್ತೆಮಾಡುವ ಪ್ರಯತ್ನ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

‘ಮೃತದೇಹಗಳನ್ನು ಸಬ್ಜಿ ಮಂಡಿ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ’ಎಂದು ಸಿಂಗ್ ತಿಳಿಸಿದ್ದಾರೆ.

ತನಿಖೆ ವೇಳೆ, ಮಹಿಳೆ ಉದ್ದೇಶಪೂರ್ವಕವಾಗಿಯೇ ಮಕ್ಕಳ ಜೊತೆ ಹಳಿ ಮೇಲೆ ಧುಮುಕಿದ್ಧಾರೆ ಎಂಬುದು ತಿಳಿದುಬಂದಿದೆ. ರೈಲು 100 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದುದರಿಂದ ನಿಲ್ಲಿಸಲು ಸಾಧ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.